Breaking
19 Sep 2026, Sat

ಧರ್ಮಸ್ಥಳ ಗ್ರಾಮದಲ್ಲಿ ಯೂಟ್ಯೂಬರ್‌ಗಳಿಗೆ ಥಳಿತ, ಹಿಂಸಾಚಾರಕ್ಕೆ ತಿರುಗಿದ ಪ್ರಕರಣ

ಧರ್ಮಸ್ಥಳ: ಧರ್ಮಸ್ಥಳ ಬುರುಡೆ ರಹಸ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಶೇಷ ತನಿಖಾ ತಂಡ ನಡೆಸುತ್ತಿರುವ ತನಿಖೆ ಈಗ ಕೊನೆಯ ಹಂತಕ್ಕೆ ಬಂದು ತಲುಪಿದೆ.

ಎಸ್ಐಟಿ ಅಧಿಕಾರಿಗಳು ಈ ಬಗ್ಗೆ ಪ್ರೆಸ್ ಮೀಟ್ ನಡೆಸಿ ತನಿಖೆಯ ಸಂಪೂರ್ಣ ಮಾಹಿತಿಯನ್ನು ಶೀಘ್ರವಾಗಿ ಮಾಧ್ಯಮಗಳ ಮುಂದೆ ಬಿಚ್ಚಿಡುವ ಎಲ್ಲ ಸಾಧ್ಯತೆಗಳು ಇವೆ.

ಈ ಮಧ್ಯೆ ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಪ್ರಚಾರ ನಡೆಸಿದ್ದಾರೆ ಎಂದು ಆರೋಪಿಸಿ ಪಾಂಗಳ ಎಂಬಲ್ಲಿ ಮೂವರು ಯೂಟ್ಯೂಬರ್ ಮೇಲೆ ಹಲ್ಲೆ ಮಾಡಲಾಗಿದೆ.

ಬುಧವಾರ ಸಂಜೆಯ ವೇಳೆ ಧರ್ಮಸ್ಥಳ ಪ್ರಕರಣದ ಕುರಿತು ಬಿಗ್ ಬಾಸ್ ಸ್ಪರ್ಧಿ ರಜತ್ ಸಂದರ್ಶನ ಮಾಡುತ್ತಿದ್ದಾಗ ತಂಡವೊಂದು ಯೂಟ್ಯೂಬರ್ ಮೇಲೆ ಹಲ್ಲೆ ನಡೆಸಿದೆ.

ಎರಡು ಗುಂಪುಗಳ ಮಧ್ಯೆ ಕಿತ್ತಾಟ ನಡೆಯುತ್ತಿದ್ದಂತೆ ಪೊಲೀಸರು ಲಾಠಿ ಚಾರ್ಜ್ ಮಾಡಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.

ಕಳೆದ 13 ವರ್ಷಗಳಿಂದ ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಪ್ರಚಾರ ನಡೆಯುತ್ತಿದೆ. ಈ ಅಪಪ್ರಚಾರಕ್ಕೆ ಮೂಲ ಕಾರಣರಾದ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣನವರ್ ಕಾರಣ. ಇವರನ್ನು ಕೂಡಲೇ ಬಂಧಿಸಬೇಕು.

ಸಮೀರ್ ಎಂಬಾತ ಯಾವುದೇ ಸಾಕ್ಷ್ಯ ಇಲ್ಲದೇ ಸುಳ್ಳು ವಿಡಿಯೋ ಮಾಡಿದ್ದಾನೆ. ಆತನ ವಿರುದ್ಧ ದೂರು ನೀಡಿದರೂ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಆರೋಪಿಸಿರುವ ಭಕ್ತರು, ಧರ್ಮಸ್ಥಳ ಠಾಣೆಗೆ ಮುತ್ತಿಗೆ ಹಾಕಿ ನ್ಯಾಯ ಕೊಡಬೇಕು ಎಂದು ಆಗ್ರಹಿಸಿದ್ದಾರೆ.

ಸದ್ಯ ಬುರುಡೆ ರಹಸ್ಯ ವಿಚಾರಕ್ಕೆ ಮುಸುಕುದಾರಿ ದೂರು ದಾರ ನೀಡಿರುವ ದೂರಿನಂತೆ ಶೋಧ ಕಾರ್ಯ ನಡೆಸಿದರೂ 12 ಸ್ಥಳಗಳಲ್ಲಿ ಯಾವುದೇ ಸಾಕ್ಷ್ಯಗಳು ಇನ್ನೂ ಸರಿಯಾಗಿ ಸಿಕ್ಕಿಲ್ಲ ಅಂತ ಹೇಳಲಾಗುತ್ತಿದೆ.

Leave a Reply

Your email address will not be published. Required fields are marked *