ಕಾರ್ಕಳ: ಶ್ರೀಗಂಧದ ಮರಗಳನ್ನು ಕಳವುಗೈದ ಆರೋಪದ ಮೇಲೆ ಮೂವರು ಆರೋಪಿಗಳನ್ನು ಕಾರ್ಕಳ ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಕುಕ್ಕುಂದೂರು ಅಯ್ಯಪ್ಪ ನಗರದ ಗಣೇಶ್ (44), ಮರ್ಣೆ ಗ್ರಾಮದ ಎಣ್ಣೆಹೊಳೆ ನಿವಾಸಿ ಸಂತೋಷ್ (35), ಮತ್ತು ಬಂಟ್ವಾಳ ಬಾಳೆಪುಣಿ ನಿವಾಸಿ ಮೊಯ್ದಿನ್ ಅಲಿಯಾಸ್ ಮೊಯಿದು ಕುಂಞ (60) ಎಂದು ಗುರುತಿಸಲಾಗಿದೆ.

ಆರೋಪಿಗಳಿಂದ ಕಳವಾಗಿದ್ದ ಸುಮಾರು 4 ಲಕ್ಷ ರೂ. ಮೌಲ್ಯದ ಶ್ರೀಗಂಧದ ಮರಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪೊಲೀಸರ ವಿಚಾರಣೆಯ ವೇಳೆ ಆರೋಪಿಗಳು ಈ ಹಿಂದೆ ಶಿರ್ವ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿಯೂ ಶ್ರೀಗಂಧ ಕಳವು ಮಾಡಿರುವುದಾಗಿ ಒಪ್ಪಿಕೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಜೂ. 16 ರಂದು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿತ್ತು.




