Breaking
19 Sep 2026, Sat

ದಬ್ಬಡ್ಕದಲ್ಲಿ ಆನೆ ದಾಳಿಗೆ ವ್ಯಕ್ತಿ ಸಾವು

ಸುಳ್ಯ: ಚೆಂಬು ಗ್ರಾಮದ ದಬ್ಬಡ್ಕ ಎಂಬಲ್ಲಿ ಆನೆ ದಾಳಿಗೆ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಆ.06 ರ ತಡರಾತ್ರಿ ನಡೆದಿದೆ.

ಆನೆ ದಾಳಿಗೆ ಮೃತಪಟ್ಟ ವ್ಯಕ್ತಿಯನ್ನು ದಬ್ಬಡ್ಕ ಕೊಪ್ಪದ ನಿವಾಸಿ ಶಿವಪ್ಪ (72) ಎಂದು ಗುರುತಿಸಲಾಗಿದೆ.

ರಾತ್ರಿ ಸುಮಾರು 10.30 ರ ಸುಮಾರಿಗೆ ಮನೆಯ ಹತ್ತಿರದ ತೋಟದಲ್ಲಿ ನಾಯಿ ಬೊಗಳುತ್ತಿರುವ ಶಬ್ಧ ಕೇಳಿದ ಹಿನ್ನಲೆ ಅವರು ತೋಟದ ಕಡೆಗೆ ಹೋದ ಸಂದರ್ಭದಲ್ಲಿ ಆನೆ ದಾಳಿ ನಡೆಸಿದ್ದು, ಗಂಭೀರವಾಗಿ ಗಾಯಗೊಂಡಿದ್ದರು.

ಮನೆಯವರು ತಕ್ಷಣವೇ ಅವರನ್ನು ಸಂಪಾಜೆ ಆಸ್ಪತ್ರೆಗೆ ಸಾಗಿಸುವ ವೇಳೆಯೇ ದಾರಿ ಮಧ್ಯೆಯೇ ಕೊನೆಯುಸಿರೆಳೆದಿದ್ಧಾರೆ.

ಮೃತ ದೇಹವನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *