Breaking
19 Sep 2026, Sat

ಧರ್ಮಸ್ಥಳದ ಮುಳಿಕ್ಕಾರುವಿನಲ್ಲಿ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ: ಪ್ರಕರಣ ದಾಖಲು

ಧರ್ಮಸ್ಥಳ: ವಿವಾಹಿತ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಧರ್ಮಸ್ಥಳ ಗ್ರಾಮದ ಮುಳಿಕ್ಕಾರು ಎಂಬಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ವಿನುತ ಎಂದು ಗುರುತಿಸಲಾಗಿದೆ.

ತಾವು ವಾಸವಿರುವ ಮನೆಯಲ್ಲಿಯೇ ವಿನುತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಧರ್ಮಸ್ಥಳ ಗ್ರಾಮದ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿದೆ.

Leave a Reply

Your email address will not be published. Required fields are marked *