Breaking
19 Sep 2026, Sat

ಇದೇ ತಿಂಗಳು ಧರ್ಮಸ್ಥಳ ಕ್ಷೇತ್ರದಲ್ಲಿ ಧರ್ಮಜಾಗರಣಾ ಸಮಾವೇಶ ನಡೆಸುತ್ತೇವೆ: ವಸಂತ ಗಿಳಿಯಾರ್

ಮಂಗಳೂರು: ಧರ್ಮಸ್ಥಳ ಕ್ಷೇತ್ರದಲ್ಲಿ ಇದೇ ತಿಂಗಳು ಧರ್ಮಜಾಗರಣಾ ಸಮಾವೇಶ ನಡೆಸುತ್ತೇವೆ ಎಂದು ಪುಣ್ಯ ಕ್ಷೇತ್ರ ಸಂರಕ್ಷಣಾ ಸಮಿತಿಯ ವಸಂತ ಗಿಳಿಯಾರ್ ಹೇಳಿದ್ದಾರೆ.

ಆ.7 ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ರೂಪಿಸಲು ವಿದೇಶಿ ಹಣ ಬಳಕೆ ಮಾಡಲಾಗಿದೆ ಎಂಬ ಅನುಮಾನವಿದೆ. ಧರ್ಮಸ್ಥಳ ವಿರುದ್ಧ ಕೆಲ ಅನಧಿಕೃತ ಮಾಧ್ಯಮಗಳು, ಯೂಟ್ಯೂಬರ್ ಗಳಿಂದ ಸುಳ್ಳು ಸುದ್ದಿ ಪ್ರಸಾರ ಮಾಡಲಾಗುತ್ತಿದ್ದು, ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಇತ್ತ ಮುಸುಕುಧಾರಿ ದೂರು ದಾರ ಯಾರ ಮೇಲೆ ಆರೋಪ ಮಾಡಿದ್ದಾನೆ ಎಂಬುದು ಇನ್ನೂ ದೃಢಪಟ್ಟಿಲ್ಲ.

ಹೀಗಿರುವಾಗ ಯಾವುದೇ ಸುದ್ದಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿಗಳು, ಶ್ರೀ ಮಂಜುನಾಥ ಸ್ವಾಮಿಗಳ ಫೋಟೊ ಬಳಕೆ ತಪ್ಪು. ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ ನಡೆಸಲಾಗುತ್ತಿದೆ. ಹೀಗಾಗಿ ಧರ್ಮಸ್ಥಳ ಕ್ಷೇತ್ರದಲ್ಲಿ ಧರ್ಮಜಾಗರಣಾ ಸಮಾವೇಶ ನಡೆಸುತ್ತೇವೆ ಎಂದರು.

Leave a Reply

Your email address will not be published. Required fields are marked *