ಮಂಗಳೂರು : ನಿಲ್ಲಿಸಿದ್ದ ಕಂಟೇನರ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಯುವಕನೋರ್ವ ಮೃತಪಟ್ಟ ಘಟನೆ ಬಲ್ಮಠದಲ್ಲಿ ನಡೆದಿದೆ.
ಮೃತಪಟ್ಟವರು ಮೊಡಂಕಾಪು ನಿವಾಸಿ ಮೆಲ್ರಾಯ್ ಶಾನ್ ಡಿಸೋಜಾ (24) ಎಂದು ಗುರುತಿಸಲಾಗಿದೆ.

ಮೃತರು ಮಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ಜಿಎನ್‌ಎಂ ಮೂರನೇ ವರ್ಷ ವ್ಯಾಸಂಗ ಮಾಡುತ್ತಿದ್ದರು ಮತ್ತು ಸರ್ಕಾರಿ ಆಸ್ಪತ್ರೆಯಲ್ಲಿ ಇಂಟರ್ನ್ ಆಗಿಯೂ ಕೆಲಸ ಮಾಡುತ್ತಿದ್ದರು.
ಈ ಕುರಿತು ಕದ್ರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




