Breaking
12 May 2026, Tue

ಪಾಣೆಮಂಗಳೂರಿನಲ್ಲಿ ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ: ಸವಾರನಿಗೆ ಗಂಭೀರ ಗಾಯ

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿಯ 75ರ ಪಾಣೆಮಂಗಳೂರು ಸಮೀಪದ ನೆಹರುನಗರ ಎಂಬಲ್ಲಿ ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿಯಾಗಿ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಆ.7ರಂದು ನಡೆದಿದೆ.

ಗಾಯಗೊಂಡಿರುವವರನ್ನು ಕಲಡ್ಕ ನಿವಾಸಿ ಸುಶಾಂತ್ ಕುಮಾರ್ ಎಂದು ಗುರುತಿಸಲಾಗಿದೆ.

ಚತುಷ್ಪತ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ಗುತ್ತಿಗೆ ವಹಿಸಿಕೊಂಡಿರುವ ಖಾಸಗಿ ಕಂಪೆನಿಗೆ ಸೇರಿದ್ದಾಗಿದ್ದು ಲಾರಿಯ ಚಾಲಕ ಅಬ್ದುಲ್‌ ನೂರ್ ಖಾಜಿಯ ಅತಿ ವೇಗದ ಚಾಲನೆ ಹಾಗೂ ನಿರ್ಲಕ್ಷ್ಯತನದಿಂದ ಈ ಅಪಘಾತ ಸಂಭವಿಸಿದೆ.

ಈ ಸ್ಥಳದಲ್ಲಿ ಹಲವಾರು ಅಪಘಾತಗಳು ಸಂಭವಿಸಿದ್ದು, ಲಾರಿ ಚಾಲಕನ ನಿರ್ಲಕ್ಷ್ಯತನದ ಚಾಲನೆಗೆ ಕಡಿವಾಣ ಹಾಕುವಂತೆ ಸ್ಥಳೀಯರು ಪೊಲೀಸ್‌ ಇಲಾಖೆಗೆ ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *