Breaking
23 Mar 2026, Mon

ಮಂಗಳೂರು: ಆಟೋರಿಕ್ಷಾದಲ್ಲಿ ಗಾಂಜಾ ಮಾರಾಟ : ವ್ಯಕ್ತಿ ಬಂಧನ

ಮಂಗಳೂರು: ಆಟೋರಿಕ್ಷಾದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಮಂಗಳ ಜ್ಯೋತಿ ಜಂಕ್ಷನ್ ಬಳಿ ಆ. 07ರಂದು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಆರೋಪಿಯನ್ನು ಬದ್ರುದ್ದೀನ್(35) ಎಂದು ಗುರುತಿಸಲಾಗಿದೆ.

ಪೊಲೀಸರು ಆರೋಪಿಯಿಂದ 2 ಕೆ.ಜಿ. ಗಾಂಜಾ, ಒಂದು ಮೊಬೈಲ್ ಫೋನ್, ಆಟೋರಿಕ್ಷಾ ಸಹಿತ ₹ 20,000 ನಗದನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಕುರಿತು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *