ಬಂಟ್ವಾಳ: ವಗ್ಗ ರಾಷ್ಟ್ರೀಯ ಹೆದ್ದಾರಿ ಸಮೀಪದ ಕಾಡಬೆಟ್ಟು ಗ್ರಾಮ ಪಿಲಿಂಗಾಲು ಶ್ರೀ ಗಾಯತ್ರಿದೇವಿ ದೇವಸ್ಥಾನದಲ್ಲಿ ಶ್ರೀ ಗುರು ರಾಘವೇಂದ್ರ ಸ್ವಾಮೀಜಿ ಅವರ 354ನೇ ಆರಾಧನಾ ಮಹೋತ್ಸವವು ಆ.11ರಂದು ಬೆಳಿಗ್ಗೆ 8.30 ಗಂಟೆಯಿಂದ ರಾತ್ರಿ 9.30ರತನಕ ನಡೆಯಲಿದೆ.

ಆ ದಿನ ಬೆಳಿಗ್ಗೆ 8.30 ಗಂಟೆಗೆ ಗುರುವರ್ಯರ ಪಂಚಲೋಹದ ವಿಗ್ರಹಕ್ಕೆ ಪಂಚಾಮೃತ ಮತ್ತು ಕಲಶಾಭಿಷೇಕ ನಡೆಯಲಿದ್ದು, ಮಧ್ಯಾಹ್ನ 12.30 ಗಂಟೆಗೆ ವಿಶೇಷ ಆರಾಧನಾ ಪೂಜೆ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 7.30ಕ್ಕೆ ಭಜನೆ ಆರಂಭಗೊಂಡು ರಾತ್ರಿ 9 ಗಂಟೆಗೆ ಮಹಾಪೂಜೆ ನೆರವೇರಲಿದೆ ಎಂದು ದೇವಳದ ಆಡಳಿತ ಮೊಕ್ತೇಸರ ಕೆ.ಎಸ್.ಪಂಡಿತ್ ತಿಳಿಸಿದ್ದಾರೆ.



