Breaking
20 Sep 2026, Sun

ಬಂಟ್ವಾಳ: ದೇವಸ್ಥಾನಗಳಲ್ಲಿ ಸಂಭ್ರಮದಿಂದ ಜರುಗಿದ ವರಮಹಾಲಕ್ಷ್ಮಿ ಪೂಜೆ

ಬಂಟ್ವಾಳ: ತಾಲೂಕಿನ ಬಿ.ಸಿ.ರೋಡು ಶ್ರೀ ರಕ್ತೇಶ್ವರಿ ದೇವಿ ಮತ್ತು ಚಂಡಿಕಾಪರಮೇಶ್ವರಿ ದೇವಸ್ಥಾನದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ ಭಕ್ತಿಪೂರ್ವಕವಾಗಿ ನೆರವೇರಿತು. ಬಿ.ಸಿ.ರೋಡಿನ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ ಪ್ರಯುಕ್ತ ಅಪಾರ ಮಂದಿ ಭಕ್ತರು ಪಾಲ್ಗೊಂಡಿದ್ದು, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.

ಅರಳ ಶ್ರೀ ಗರುಡ ಮಹಾಕಾಳಿ ದೇವಸ್ಥಾನ, ವಾಮದಪದವು ಸಮೀಪದ ಅಜ್ಜಿಬೆಟ್ಟು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನ, ಸಿದ್ಧಕಟ್ಟೆ ಸಮೀಪದ ಪೂಂಜ ಶ್ರೀ ಪಂಚದುರ್ಗಾ ಪರಮೇಶ್ವರಿ ದೇವಸ್ಥಾನ, ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಮಾವಿನಕಟ್ಟೆ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜಾ ಸಮಿತಿ ಮತ್ತಿತರ ಕಡೆಗಳಲ್ಲಿ ನಡೆದ ಪೂಜೆಯಲ್ಲಿ ಅಪಾರ ಮಂದಿ ಮಹಿಳಾ ಭಕ್ತರು ಪಾಲ್ಗೊಂಡು ಶ್ರೀ ದೇವರ ಕೃಪೆಗೆ ಪಾತ್ರರಾಗಿ ಪ್ರಸಾದವನ್ನು ಸ್ವೀಕರಿಸಿದರು.

Leave a Reply

Your email address will not be published. Required fields are marked *