Breaking
24 Mar 2026, Tue

ನಾರಾಯಣ ಕಾರಂತರ ಪೌರೋಹಿತ್ಯದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ

ಗುರುವಾಯನಕೆರೆ: ಗುಂಡೂರಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ, ಹೊಸಂಗಡಿ ವಲಯ ಗುಂಡೂರಿ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯು ಲಕ್ಷ್ಮಿ ನಾರಾಯಣ ಕಾರಂತ ಇವರ ಪೌರೋಹಿತ್ಯದಲ್ಲಿ ನಡೆಯಿತು.

ಈ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಸಿದ್ದಕಟ್ಟೆ ಗುಣಶ್ರೀ ಶಾಲೆಯ ಯೋಗ ಶಿಕ್ಷಕರಾದ ಶ್ರೀಮತಿ ಶಶಿಕಲಾ ರವರು ಸಂಸ್ಕೃತಿ, ಸಂಸ್ಕಾರ ಬಗ್ಗೆ ಧಾರ್ಮಿಕ ಉಪನ್ಯಾಸ ನೀಡಿದರು. ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷರಾದ ರಮೇಶ್ ಪೂಜಾರಿ ಯವರು ಯೋಜನೆಯಿಂದ ಅದ ಸಾಮಾಜಿಕ ಹಾಗೂ ಆರ್ಥಿಕ ಬದಲಾವಣೆ ಬಗ್ಗೆ ತಿಳಿಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರವೀಣ್ ಚಂದ್ರ ಜೈನ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ವೇದಿಕೆಯಲ್ಲಿ ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷರು ಹರೀಶ್ ಕುಮಾರ್ ಪೊಕ್ಕಿ, ವಲಯ ಮೇಲ್ವಿಚಾರಕರಾದ ಶ್ರೀಮತಿ ವೀಣಾ , ವರಮಹಾಲಕ್ಷ್ಮಿ ಪೂಜಾ ಸಮಿತಿ ಅಧ್ಯಕ್ಷರಾದ ಸಂಗೀತ , ಉಷಾ ರವರು , ಒಕ್ಕೂಟ ಅಧ್ಯಕ್ಷರು ಸದಾನಂದ ಪೂಜಾರಿ, ಜನಜಾಗೃತಿ ಗ್ರಾಮ ಸಮಿತಿ ಅಧ್ಯಕ್ಷರು ಸೇಸಪ್ಪ ಪೂಜಾರಿ ಉಪಸ್ಥಿತರಿದ್ದರು. ಸಮಿತಿ ಕಾರ್ಯದರ್ಶಿ ಸೌಜನ್ಯ ಜೈನ ವರದಿ ವಾಚಿಸಿದರು. ಒಕ್ಕೂಟ ಕಾರ್ಯದರ್ಶಿ ಪ್ರವೀಣ್ ಆಚಾರ್ಯ ಸ್ವಾಗತಿಸಿ, ಸೇವಾಪ್ರತಿನಿಧಿ ಹರೀಶ್ ಬಾಡರು ರವರು ಧನ್ಯವಾದ ವಿತ್ತರು.

Leave a Reply

Your email address will not be published. Required fields are marked *