Breaking
30 Jun 2026, Tue

ಬಂಟ್ವಾಳ: ಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣ: ಮತ್ತೋರ್ವ ಆರೋಪಿ ಬಂಧನ

ಬಂಟ್ವಾಳ: ಕೊಳತ್ತಮಜಲು ಅಬ್ದುಲ್ ರೆಹಮಾನ್  ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಓರ್ವನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಆ.10 ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ರಂಜಿತ್ ಯಾನೆ ರಂಜು (35) ಎಂದು ಗುರುತಿಸಲಾಗಿದೆ.

ಮೇ 27ರಂದು ಆರೋಪಿಗಳು ಅಬ್ದುಲ್ ರೆಹಮಾನ್  ಅವರನ್ನು ಹತ್ಯೆಗೈದು ಮತ್ತು ಅವರ ಸ್ನೇಹಿತ ಕಲಂದರ್ ಶಾಫಿ ಅವರ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ 12 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *