Breaking
30 Jun 2026, Tue

ಕಾಪು : ಬೈಕ್ ಡಿಕ್ಕಿ ಹೊಡೆದು ಪಾದಚಾರಿ ಸಾವು; ಸವಾರರಿಗೆ ಗಂಭೀರ ಗಾಯ

ಉಚ್ಚಿಲ: ಬೈಕೊಂದು ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಆ.9 ರಂದು ರಾತ್ರಿ ಉಚ್ಚಿಲದಲ್ಲಿ ನಡೆದಿದೆ. ಬೈಕ್‌ನಲ್ಲಿದ್ದ ಇಬ್ಬರು ಸವಾರರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತಪಟ್ಟ ಪಾದಾಚಾರಿ ಶಂಕರ ಶೆಟ್ಟಿ ಎಂದು ತಿಳಿದುಬಂದಿದೆ. ಗಾಯಗೊಂಡವರನ್ನು ಮಂಗಳೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳಾದ ನತಾಷಾ ಮತ್ತು ದರ್ಶನ್ ರಾಜ್ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.

ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *