ಬಂಟ್ವಾಳ: ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ ಇದರ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯಾಗಿ, ಪ್ರಸ್ತುತ ನಿವೃತ್ತರಾಗಿದ್ದ ಶ್ರೀಯುತ ಶೀನ ಶೆಟ್ಟಿ ಅಲ್ಪಕಾಲದ ಅನಾರೋಗ್ಯದಿಂದ ಇಂದು ನಿಧನರಾದರು.
ಶ್ರೀಯುತರು ಸಿದ್ದಕಟ್ಟೆ ಸಿ ಎ ಬ್ಯಾಂಕ್ ನಲ್ಲಿ 35 ವರ್ಷ ಪ್ರಾಮಾಣಿಕ ಸೇವೆ ಸಲ್ಲಿಸಿ,ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯಾಗಿ ನಂತರ ನಿವೃತ್ತರಾಗಿ ಇಬ್ಬರು ಗಂಡು ಮಕ್ಕಳು,ಪತ್ನಿ, ಸೊಸೆಯಂದಿರು, ಮೊಮ್ಮಕ್ಕಳೊಂದಿಗೆ ಸುಖಿ ಸಂಸಾರ ನಡೆಸುತಿದ್ದರು.
ಶ್ರೀಯುತರ ಅಂತ್ಯ ಕ್ರಿಯೆಯು ನಾಳೆ ಬೆಳಿಗ್ಗೆ 11 ಗಂಟೆಗೆ ಮೃತರ ಸ್ವಗ್ರಹ ದಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದರು.
ದಕ್ಷಿಣಕನ್ನಡ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ,ಆರ್ ಎಸ್ ಎಸ್ ಹಿರಿಯ ಮುಖಂಡರಾದ ಡಾಕ್ಟರ್ ಪ್ರಭಾಕರ್ ಭಟ್ ಕಲ್ಲಡ್ಕ, , ಬಂಟ್ವಾಳ ಮಂಡಲ ಬಿಜೆಪಿ ಅಧ್ಯಕ್ಷ ಚೆನ್ನಪ್ಪ ಕೋಟ್ಯಾನ್,ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು, ಸಿ ಎ ಬ್ಯಾಂಕ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆರತಿ ಶೆಟ್ಟಿ,ಮಾಜಿ ಅಧ್ಯಕ್ಷರಾದ ಗೋಪಿನಾಥ್ ರೈ, ಪದ್ಮರಾಜ್ ಬಲ್ಲಾಳ್, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿರ್ದೇಶಕ ಟಿ. ಜಿ.ರಾಜರಾಮ್ ಭಟ್, ಬಂಟ್ವಾಳ ಕೃಷಿ ಉತ್ಪನ್ನ ಮಾರುಕಟ್ಟೆ ಸಹಕಾರ ಸಂಘದ ಅಧ್ಯಕ್ಷ ರವೀಂದ್ರ ಕಂಬಳಿ,ಸಿ ಎ ಬ್ಯಾಂಕ್ ಎಲ್ಲಾ ನಿರ್ದೇಶಕರು ಸಹಿತ ಅನೇಕ ಸಹಕಾರಿ ಪ್ರಮುಖರು ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ.