Breaking
30 Jun 2026, Tue

ಬಂಟ್ವಾಳ: ಹಿಂದೂ ರುದ್ರಭೂಮಿಯಲ್ಲಿ ಲಕ್ಷಾಂತರ ಮೌಲ್ಯದ ಸೊತ್ತುಗಳು ಕಳವು

ಬಂಟ್ವಾಳ: ಹಿಂದೂ ರುದ್ರಭೂಮಿಯಲ್ಲಿ ಕಳ್ಳತನ ನಡೆದಿರುವ ವಿಚಿತ್ರ ಘಟನೆವೊಂದು ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮದ ದೇವಿನಗರ ಎಂಬಲ್ಲಿ ನಡೆದಿದೆ.

ಕಳ್ಳರು ರುದ್ರಭೂಮಿಯಲ್ಲಿದ್ದ ಹೆಣ ಸುಡುವ ಸಿಲಿಕಾನ್ ಚೇಂಬರ್, ಹಿತ್ತಾಳೆಯ ನೀರಿನ ನಲ್ಲಿ, ಕಬ್ಬಿಣದ ಏಣಿ, ಕಬ್ಬಿಣದ ಗೇಟ್ ಹಾಗೂ ಇನ್ನಿತರ ಸುಮಾರು 4 ಲಕ್ಷ ಮೌಲ್ಯದ ಸೊತ್ತುಗಳನ್ನು ಕಳವು ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಆ.11 ರಂದು ಸ್ಥಳೀಯ ನಿವಾಸಿಯೊಬ್ಬರ ಮೃತದೇಹ ದಹನಕ್ಕೆಂದು ತೆರಳಿದಾಗ ಘಟನೆ ಬೆಳಕಿಗೆ ಬಂದಿದೆ.

ಕಳೆದ ಕೆಲ ದಿನಗಳಿಂದ ಗ್ರಾಮದಲ್ಲಿ ಕಳ್ಳರ ಹಾವಳಿ ಇದ್ದು, ಮನೆಯ ಹೊರಗಡೆ ನಿಲ್ಲಿಸಿರುವ ವಾಹನಗಳ ಸಹಿತ ಬೆಲೆ ಬಾಳುವ ವಸ್ತುಗಳು ಕಳವಾಗುತ್ತಿವೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಈ ಬಗ್ಗೆ ನಿಗಾ ವಹಿಸಿ ಜಾಗೃತೆಯಿಂದ ಇರುವಂತೆ ಅಮ್ಟಾಡಿ ಗ್ರಾ.ಪಂ.ಅಧ್ಯಕ್ಷ ವಿಜಯ್ ಅವರು ಗ್ರಾಮಸ್ಥರಲ್ಲಿ ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *