Breaking
30 Jun 2026, Tue

ಚಿಕ್ಕಮಗಳೂರಿನಲ್ಲಿ ಕಾರು,ಬಸ್ ನಡುವೆ ಅಪಘಾತ: ನಾಲ್ವರಿಗೆ ಗಂಭೀರ ಗಾಯ

ಚಿಕ್ಕಮಗಳೂರು : ಕಾರು ಹಾಗೂ ಬಸ್ ನ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಬಿದಿರುತಳ ಬಳಿ ಆ. 11ರಂದು ನಡೆದಿದೆ.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಧರ್ಮಸ್ಥಳದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಹಾಗೂ ಚಿಕ್ಕನಾಯಕನ ಹಳ್ಳಿಯಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರಿನ ನಡುವೆ ಘಾಟಿಯ ತಿರುವಿನಲ್ಲಿ ಈ ಅಪಘಾತ ಸಂಭವಿಸಿದೆ.

ಈ ಕುರಿತು ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *