ಆ.17 ರಂದು ಕುದ್ಕೋಳಿಯಲ್ಲಿ 20ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಮೊಸರು ಕುಡಿಕೆ ಉತ್ಸವ

ಬಂಟ್ವಾಳ: ಓಂ ಫ್ರೆಂಡ್ಸ್ ಯುವಕ ಮಂಡಲ (ರಿ.) ಹಾಗೂ ಮಹಿಳಾ ಸಮಿತಿ ಕುದ್ಕೋಳಿ ಇವರ ಆಶ್ರಯದಲ್ಲಿ20ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವವು ಆ. 17 ರಂದು ಕುದ್ಕೋಳಿ ಕೇಂದ್ರ ಮೈದಾನದಲ್ಲಿ ನಡೆಯಲಿದೆ.

ಬೆಳಿಗ್ಗೆ 9 ಗಂಟೆಗೆ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿದ್ದು, ಮಧ್ಯಾಹ್ನ 1 ಗಂಟೆ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.

ಸಂಜೆ 4 ಗಂಟೆಗೆ ಸಭಾ ಕಾರ್ಯಕ್ರಮವು ನಡೆಯಲಿದ್ದು ನಂತರ ಪುಟಾಣಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಅಧ್ಯಕ್ಷರು ಹಾಗೂ ಸರ್ವಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *