ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್( ರಿ) ಬಂಟ್ವಾಳ ವತಿಯಿಂದ ಬಂಟ್ವಾಳ ತಾಲೂಕಿನ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮಕ್ಕೆ ಶ್ರೀ ಕಾರಿಂಜೇಶ್ವರ ದೇವಸ್ಥಾನದ ವಠಾರದ ಸುತ್ತ ಸ್ವಚ್ಛತಾ ಕಾರ್ಯಕ್ರಮ ಮಾಡುವ ಮೂಲಕ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಮಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಜಯಾನಂದ ಅವರು ಸ್ವಾತಂತ್ರ್ಯ ಸಂಗ್ರಾಮದ ಹೊಸ್ತಿಲಲ್ಲಿ ತಾಲೂಕಿನಲ್ಲಿ 70 ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಕಾಡಬೆಟ್ಟು ಒಕ್ಕೂಟ ಮತ್ತು ಕಾವಳಪಡೂರು ಒಕ್ಕೂಟ ಹಾಗೂ ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರಿಂದ ಕಾರಿಂಜೇಶ್ವರ ದೇವಸ್ಥಾನದಲ್ಲಿ ಸ್ವಚ್ಚತೆ ನಡೆಯಿತು.
ಈ ಸಂದರ್ಭದಲ್ಲಿ ಪ್ರಮೋದ್ ಕುಮಾರ್ ರೈ ವೀರೇಂದ್ರ ಅಮೀನ್, ಚಂದ್ರಶೇಖರ್ ಶೆಟ್ಟಿ, ಪ್ರವೀಣ್ ಕಾಡಬೆಟ್ಟು, ಸೇವಾ ಪ್ರತಿನಿಧಿಗಳಾದ ರೇಖಾ ಹಾಗೂ ರಜನಿ ಹಾಗೂ ಒಕ್ಕೂಟದ ಸದಸ್ಯರು ಶೌರ್ಯ ತಂಡದ ಸದಸ್ಯರು ಉಪಸ್ಥಿತರಿದ್ದರು.



