ಬಂಟ್ವಾಳ: ಶ್ರೀ ಬಾಲ ಗಣಪತಿ ದೇವಸ್ಥಾನ ಅನ್ನಪಾಡಿ ಸಜೀಪ ಮೂಡ ಅಂಗಾರಕದಲ್ಲಿ ಸಂಕಷ್ಟಿ ಪ್ರಯುಕ್ತ ವಿಶೇಷ ಸೇವಾ ಪೂಜೆ ಹಾಗೂ ಸಾಮೂಹಿಕ ಸಂಕಷ್ಟಹರ ಗಣಪತಿ ವೃತ ಕಥಾ ಪೂಜೆಯು ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ನಡೆಯಿತು.

ಈ ವಿಶೇಷವಾದ ದಿನದಂದು ಊರವರು ಹಾಗೂ ಕುಟುಂಬದವರು ಶ್ರೀ ದೇವರ ಕೃಪೆಗೆ ಪಾತ್ರರಾಗಿ ಪ್ರಸಾದವನ್ನು ಸ್ವೀಕರಿಸಿದರು.




