Breaking
20 Sep 2026, Sun

ಬಳೆoಜ ಬ್ರಹ್ಮಶ್ರೀ ನಾರಾಯಣ ಗುರು ಸಬಾಭವನದಲ್ಲಿ ನಾಲ್ಕೂರು ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ ಸಭೆ

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಬಳೆoಜ, ತೆಂಕಕಾರಂದೂರು, ನಾಲ್ಕೂರು ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ ಸಭೆಯು ಆ.11 ರಂದು ಬಳೆoಜ ಬ್ರಹ್ಮಶ್ರೀ ನಾರಾಯಣ ಗುರು ಸಬಾಭವನದಲ್ಲಿ ನಡೆಯಿತು.

ಈ ಕಾರ್ಯಕ್ರಮವನ್ನು ಹಿರಿಯ ಕಾರ್ಯಕರ್ತರಾದ ನಾಣ್ಯಪ್ಪ ಪೂಜಾರಿಯವರು ದೀಪ ಬೆಳಗಿಸಿ ಉದ್ಘಾಟಿಸಿದರು. ಬೆಳ್ತಂಗಡಿ ಮಂಡಲ ಬಿಜೆಪಿ ಪ್ರಧಾನ ಪ್ರಶಾಂತ್ ಪಾರೆಂಕಿಯವರು ಉದ್ಘಾಟನಾ ಭಾಷಣ ಮಾಡಿದರು. ಶಾಸಕರಾದ ಹರೀಶ್ ಪೂಂಜರವರು ಪಾಲ್ಗೊಂಡು ಕಾರ್ಯಕರ್ತರೊಂದಿಗೆ ಪಕ್ಷ ಸಂಘಟನೆ ಮತ್ತು ಕಾರ್ಯಚಟುವಟಿಕೆಯ ಕುರಿತು ವಿಸ್ತ್ರುತವಾಗಿ ಸಮಾಲೋಚನೆ ನಡೆಸಿದರು.

ಈ ಸಂದರ್ಭದಲ್ಲಿ ರವಿ ಇಳಂತಿಲ, ಮಂಡಲ ಉಪಾಧ್ಯಕ್ಷರಾದ ಮೋಹನ್ ಅಂಡಿಂಜೆ, ಮಡoತ್ಯಾರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಗೋಪಾಲ ಕೃಷ್ಣ, ಅಳದಂಗಡಿ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಮಾಧವ ಶಿರ್ಲಾಲ್ ಬೈಠಕ್ ನೀಡಿದರು. ಅಭ್ಯಾಸ ವರ್ಗ ಸಹಸಂಚಾಲಕರಾದ ದಿನಕರ್ ಕುಲಾಲ್, ಮಂಡಲ ಉಪಾಧ್ಯಕ್ಷರರಾದ ಸದಾನಂದ ಉಂಗಿನ ಬೈಲ್, ಶಕ್ತಿ ಕೇಂದ್ರ ಪ್ರಮುಖರಾದ ರಾಕೇಶ್ ಹೆಗ್ಡೆ ಹೇಮಂತ್ ಕುಮಾರ್, ಕರುಣಾಕರ ಹೆಗ್ಡೆ,ಪ್ರಮುಖರು, ಜನಪ್ರತಿನಿದಿನಗಳು ಹಾಗೂ ಅನ್ಯನ್ಯ ಜವಾಬ್ದಾರಿಯ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *