Breaking
20 Sep 2026, Sun

ಇಸ್ಲಾಂಗೆ ಮತಾಂತರಗೊಳ್ಳುವಂತೆ ಒತ್ತಾಯ : ಡೆತ್ ನೋಟ್ ಬರೆದಿಟ್ಟು ಯುವತಿ ಆತ್ಮಹತ್ಯೆ

ಕೇರಳ: ಪ್ರೇಮಿಯೊಬ್ಬ ಪ್ರಿಯತಮೆಗೆ ಇಸ್ಲಾಂಗೆ ಮತಾಂತರಗೊಳ್ಳುವಂತೆ ಒತ್ತಾಯ ಮಾಡಿದಕ್ಕೆ, ಆಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೇರಳದ ಎರ್ನಾಕುಲಂನ ಕೋತಮಂಗಲಂ ಎಂಬಲ್ಲಿ ನಡೆದಿದೆ.

ಮೃತ ಯುವತಿಯನ್ನು ಸೋನಾ ಎಲ್ದೋಸ್(23)ಎಂದು ಗುರುತಿಸಲಾಗಿದೆ.

ಈಕೆ ತನ್ನ ಗೆಳೆಯ ರಮೀಸ್ ತನ್ನ ಮೇಲೆ ಹಲ್ಲೆ ನಡೆಸಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳುವಂತೆ ಒತ್ತಾಯಿಸಿದ್ದಾನೆ ಎಂದು ಆರೋಪಿಸಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆ ಡೆತ್ ನೋಟ್ ನಲ್ಲಿ ಸೋನಾ ರಮೀಸ್ ಮದುವೆಯನ್ನು ನೋಂದಾಯಿಸುವ ಭರವಸೆಯ ಮೇರೆಗೆ ತನ್ನ ಮನೆಗೆ ಕರೆದೊಯ್ದಿದ್ದು, ಅದಕ್ಕೂ ಮೊದಲು ಅವನ ಕುಟುಂಬವು ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳುವಂತೆ ಒತ್ತಾಯಿಸಿತು ಎಂದು ಸೋನಾ ಹೇಳಿಕೊಂಡಿದ್ದಾಳೆ.

ಪೊಲೀಸರು ರಮೀಸ್ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಕೇಸು ದಾಖಲಿಸಿ ಬಂಧಿಸಿದ್ದಾರೆ.

Leave a Reply

Your email address will not be published. Required fields are marked *