ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ನಡೆದ ಮಿತ್ತಬಾಗಿಲಿನ ಶಕ್ತಿ ಕೇಂದ್ರದ ಪಂಚಾಯತ್ ಮಟ್ಟದ ಸಭೆ

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಶಕ್ತಿ ಕೇಂದ್ರದ ಪಂಚಾಯತ್ ಮಟ್ಟದ ಸಭೆ ಬೆಳ್ತಂಗಡಿ ತಾಲೂಕಿನ ಕುಕ್ಕಾವು ಶ್ರೀ ಸದಾಶಿವೇಶ್ವರ ದೇವಸ್ಥಾನ ವಠಾರ ದಲ್ಲಿ ಆ.10 ರಂದು ನಡೆಯಿತು.

ಕಾರ್ಯಕ್ರಮವನ್ನು ಹಿರಿಯ ಕಾರ್ಯಕರ್ತರಾದ ವಾಸುದೇವ ರಾವ್ ರವರು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.

ಶಾಸಕರಾದ ಹರೀಶ್ ಪೂಂಜರವರು ಪಾಲ್ಗೊಂಡು ಕಾರ್ಯಕರ್ತರೊಂದಿಗೆ ಪಕ್ಷ ಸಂಘಟನೆ ಮತ್ತು ಕಾರ್ಯಚಟುವಟಿಕೆಯ ಕುರಿತು ವಿಸ್ತ್ರುತವಾಗಿ ಸಮಾಲೋಚನೆ ನಡೆಸಿದರು.

ಈ ಸಂದರ್ಭ ಯುವ ವಕೀಲರಾದ ಯತೀಶ್ ಪಣೆಕ್ಕರ, ಮಂಡಲ ಉಪಾಧ್ಯಕ್ಷರಾದ ಸದಾನಂದ ಪೂಜಾರಿ ಉಂಗಿನಬೈಲ್, ವೃಷಾoಕ್ ಖಾದಿಲ್ಕರ್ ಬೈಠಕ್ ನೀಡಿದರು.ಲಾಯಿಲ ಮಹಾಶಕ್ತಿ ಕೇಂದ್ರ ಕಾರ್ಯದರ್ಶಿ ಅರವಿಂದ್ ಲಾಯಿಲ,ರೈತಮೋರ್ಚಾ ಜಿಲ್ಲಾಧ್ಯಕ್ಷರಾದ ಗಣೇಶ್ ಗೌಡ ನಾವೂರು,ಮಂಡಲ ಉಪಾಧ್ಯಕ್ಷರು ಅಭ್ಯಾಸ ವರ್ಗ ಸಂಚಾಲಕರಾದ ಕೊರಗಪ್ಪ ಗೌಡ ಚಾರ್ಮಾಡಿ, ಪ್ರಭಾರಿ ಗಿರೀಶ್ ಡೊಂಗ್ರೆ, ಮಿತ್ತಬಾಗಿಲು ಪಂಚಾಯತ್ ಅಧ್ಯಕ್ಷರಾದ ವಿನಯ ಚಂದ್ರ,ಶಕ್ತಿ ಕೇಂದ್ರ ಪ್ರಮುಖರು, ಜನಪ್ರತಿನಿಧಿಗಳು ಹಾಗೂ ಅನ್ಯನ್ಯ ಜವಾಬ್ದಾರಿಯ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *