ಟೇಬಲ್ ಟೆನಿಸ್ ಟೂರ್ನಮೆಂಟ್ ನಲ್ಲಿ ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಾಲಾ ಬಾಲಕರ ತಂಡ ದ್ವಿತೀಯ ಸ್ಥಾನ

ಬೆಳ್ತಂಗಡಿ: ತಾಲೂಕು ಮಟ್ಟದ 17ರ ವಯೋಮಾನದ ಟೇಬಲ್ ಟೆನಿಸ್ ಟೂರ್ನಮೆಂಟ್ ಧರ್ಮಸ್ಥಳದ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆ. 11 ರಂದು ನಡೆಯಿತು.

ಈ ಟೂರ್ನಮೆಂಟ್‌ ನಲ್ಲಿ ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯ ಶಾಲಾ ಬಾಲಕರ ತಂಡವು ದ್ವಿತೀಯ ಸ್ಥಾನವನ್ನು ಪಡೆದು ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದೆ.

ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಕೃಷ್ಣಾನಂದ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆದ ಈ ತಂಡದಲ್ಲಿ ನೀರಜ್, ಸಾತ್ವಿಕ್, ಶಿವರಾಜ್ ಆಯ್ಕೆಯಾಗಿದ್ದಾರೆ.

Leave a Reply

Your email address will not be published. Required fields are marked *