Breaking
20 Sep 2026, Sun

ಆಡಿಯೋವನ್ನು ಶೇರ್ ಮಾಡಿದಕ್ಕೆ ಸ್ನೇಹಿತರಿಂದಲೇ ವ್ಯಕ್ತಿಯ ಹತ್ಯೆ

ಉಡುಪಿ: ತಾಲೂಕಿನ ಪುತ್ತೂರು ಸುಬ್ರಹ್ಮಣ್ಯ ನಗರದ ಲಿಂಗೋಟ್ಟುಗುಡ್ಡೆಯಲ್ಲಿ ವ್ಯಕ್ತಿಯೋರ್ವನನ್ನು ಸ್ನೇಹಿತರೇ ಬರ್ಬರವಾಗಿ ಹತ್ಯೆಗೈದ ಘಟನೆ ಆ. 12 ರಂದು ರಾತ್ರಿ ನಡೆದಿದೆ.

ಕೊಲೆಯಾದ ವ್ಯಕ್ತಿಯನ್ನು ವಿನಯ್ ದೇವಾಡಿಗ (40) ಎಂದು ಗುರುತಿಸಲಾಗಿದೆ. ಕೊಲೆ ಆರೋಪಿಗಳನ್ನು ಬ್ರಹ್ಮಾವರ ಕೊಕ್ಕರ್ಣೆಯ ಗಾಂಧಿನಗರ ನಿವಾಸಿಗಳಾದ ಅಜಿತ್(28), ಅಕ್ಷೇಂದ್ರ (34) ಹಾಗೂ ಕೊಕ್ಕರ್ಣೆ ಬೆನಗಲ್ ನಿವಾಸಿ ಪ್ರದೀಪ್ ಆಚಾರ್ಯ ಎಂದು ಗುರುತಿಸಲಾಗಿದ್ದು, ಮೂವರು ಪೊಲೀಸರಿಗೆ ಶರಣಾಗಿದ್ದು ವಿಚಾರಣೆಗೆ ಒಳಪಡಿಸಿದ್ದಾರೆ.

ವಿನಯ್‌ ಅವರು ಎಂದಿನಂತೆ ಊಟ ಮುಗಿಸಿ ಮಲಗಿದ್ದ ವೇಳೆ ರಾತ್ರಿ ವೇಳೆ ದುಷ್ಕರ್ಮಿಗಳು ಜೋರಾಗಿ ಮನೆಯ ಬಾಗಿಲು ತಟ್ಟಿದ್ದು ಮನೆಯ ಬಾಗಿಲು ತೆರೆದು ವಿನಯ್ ಇದ್ದಾನ ಎಂದು ವಿಚಾರಿಸಿದ ದುಷ್ಕರ್ಮಿಗಳು ಮನೆಯ ಎಲ್ಲಾ ಕಡೆ ಹುಡುಕಿ ಮಲಗುವ ಕೋಣೆಗೆ ನುಗ್ಗಿ, ವಿನಯ್ ಗೆ ಮಾರಕಾಸ್ತ್ರದೊಂದಿಗೆ ಹಲ್ಲೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ತಡೆಯಲು ಯತ್ನಿಸಿದ ಪತ್ನಿಗೂ ಗಾಯವಾಗಿದೆ. ಗಂಭೀರವಾಗಿ ಗಾಯಗೊಂಡ ವಿನಯ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಆರೋಪಿ ಆಕ್ಷೇಂದ್ರನಿಗೆ ಜೀವನ್ ಎಂಬಾತನು ಬೈದಿರುವ ಆಡಿಯೋವನ್ನು ಬೇರೆಯವರಿಗೆ ಶೇರ್ ಮಾಡಿ ವೈರಲ್ ಮಾಡಿರುವ ಕಾರಣ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *