ಬಂಟ್ವಾಳ: ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಸಿದ್ದಕಟ್ಟೆ ಇಲ್ಲಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಶೀನ ಶೆಟ್ಟಿಯವರು ಇತ್ತೀಚಿಗೆ ದೈವಾಧೀನರಾಗಿದ್ದು,ಅವರ ಆತ್ಮಕ್ಕೆ ಚಿರಶಾಂತಿ ಕೋರಿ ದಿನಾಂಕ 01-10-2024 ಮಂಗಳವಾರ ಬೆಳ್ಳಿಗೆ 10.30 ಕ್ಕೆ ಸರಿಯಾಗಿ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಬೆಳ್ಳಿಪ್ಪಾಡಿ ಕೃಷ್ಣ ರೈ ರೈತ ಸಭಾಂಗಣದಲ್ಲಿ ಶ್ರದ್ದಾಂಜಲಿ ಸಭೆಯನ್ನು ಏರ್ಪಡಿಸಿದೆ.
ಸಂಘದ ಸದಸ್ಯರು ಹಾಗೂ ಮೃತರ ಸಂಬಂಧಿಕರು, ಅಭಿಮಾನಿಗಳು , ಹಿತೈಷಿಗಳು ಈ ಶ್ರದ್ದಾಂಜಲಿ ಸಭೆಯಲ್ಲಿ ಭಾಗವಹಿಸಬೇಕಾಗಿ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.