ಮೈಸೂರು:ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಅಸಲಿ ಸಂಕಷ್ಟ ಶುರುವಾಗಿದೆ.ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶದ ನಂತರ ಸಿಎಂ ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧ ಎಫ್‌ಐಆರ್ (FIR) ದಾಖಲಾಗಿದೆ.
ದೂರುದಾರ ಸ್ನೇಹಮಯಿ ಕೃಷ್ಣ ದೂರಿನ ಆಧಾರದ ಮೇಲೆ ಮೈಸೂರಿನ ಲೋಕಾಯುಕ್ತ ಪೊಲೀಸರು ಸಿಎಂ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.
ಹಗರಣ ಸಂಬಂಧ ಸಿಆರ್‌ಪಿಸಿ ಸೆಕ್ಷನ್ 156(3) ಅಡಿ ತನಿಖೆ ನಡೆಸಿ ಮೂರು ತಿಂಗಳಲ್ಲಿ ವರದಿ ನೀಡುವಂತೆ ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಆದೇಶ ನೀಡಿದ್ದರು.