Breaking
12 May 2026, Tue

ಬೆಳ್ತಂಗಡಿ: ಗಾಂಜಾ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ

ಬೆಳ್ತಂಗಡಿ: ಅಕ್ರಮ ಗಾಂಜಾ ದಾಸ್ತಾನು ಮತ್ತು ಮಾರಾಟ ಪ್ರಕರಣದಲ್ಲಿ ಆರೋಪಿಯನ್ನು ಬೆಳ್ತಂಗಡಿ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ನಿವಾಸಿ ಮಹಮ್ಮದ್ ರಫೀಕ್ ಅಲಿಯಾಸ್ ಮದ್ದಡ್ಕ ರಫೀಕ್ (39) ಎಂದು ಗುರುತಿಸಲಾಗಿದೆ.

ಹಲವಾರು ಸಮಯದಿಂದ ತಲೆಮರಿಸಿಕೊಂಡಿದ್ದ ಆರೋಪಿಯನ್ನು ಬಂಧಿಸಿ, ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ಆರೋಪಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.

ಆರೋಪಿಯ ವಿರುದ್ಧ ಈಗಾಗಲೇ ಬೆಳ್ತಂಗಡಿ ಪೊಲೀಸ್ ಠಾಣೆ, ವೇಣೂರು ಪೊಲೀಸ್ ಠಾಣೆ, ಚಿಕ್ಕಮಗಳೂರು ಸೆನ್ ಪೊಲೀಸ್ ಠಾಣೆ, ಬಣಕಲ್ ಪೊಲೀಸ್ ಠಾಣೆ, ದ.ಕ ಜಿಲ್ಲಾ ಸೆನ್ ಪೊಲೀಸ್ ಠಾಣೆ, ಹಾಗೂ ಬಂಟ್ವಾಳ ಅಬಕಾರಿ ಠಾಣೆ, ಬೆಳ್ತಂಗಡಿ ಅಬಕಾರಿ ಠಾಣೆಯಲ್ಲಿ ಗಾಂಜಾ ಪ್ರಕರಣಗಳು ದಾಖಲಾಗಿದೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *