Breaking
20 Sep 2026, Sun

ಪೊಲೀಸರನ್ನು ಅವಾಚ್ಯವಾಗಿ ನಿಂದನೆ: ಮಹಿಳೆ ಸೇರಿ ಇಬ್ಬರ ಬಂಧನ

ಬೆಂಗಳೂರು: ಸಂಚಾರ ಪೊಲೀಸರನ್ನು ಅವಾಚ್ಯವಾಗಿ ನಿಂದಿಸಿ, ರಸ್ತೆಯಲ್ಲಿ ಹೈಡ್ರಾಮಾ ಮಾಡಿದ್ದ ಹಿಂದಿ ಮಹಿಳೆ ಸೇರಿ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.

ನಗರದ ಶೇಷಾದ್ರಿ ಪುರಂ ಕಾಲೇಜು ಬಳಿ ಮಹಿಳೆ ಮತ್ತು ಆಕೆಯ ಸವಾರ ನೋ ಪಾರ್ಕಿಂಗ್ ಜಾಗದಲ್ಲಿ ಗುರುವಾರ ದ್ವಿಚಕ್ರ ವಾಹನ ನಿಲ್ಲಿಸಿದ್ದರು.ಇದನ್ನು ಗಮನಿಸಿದ ಸಂಚಾರ ಪೊಲೀಸರು ಬೈಕ್ಗೆ ವೀಲ್ ಕ್ಲಾಂಪ್ ಹಾಕಿದ್ದರು. ಹೀಗಾಗಿ ಸಿಟ್ಟಗೆದ್ದ ಮಹಿಳೆ, ಸಂಚಾರ ಪೊಲೀಸರ ವಿರುದ್ಧವೇ ಹರಿಹಾಯ್ದಿದ್ದರು.ಪುರುಷ ಪೊಲೀಸ್ ವಿರುದ್ಧ ಮಾತ್ರವಲ್ಲದೇ ಸಂಚಾರ ಮಹಿಳಾ ಪೊಲೀಸರ ವಿರುದ್ಧವೂ ಅವಾಚ್ಯವಾಗಿ ನಿಂದನೆ ಮಾಡಿದ್ದರು.

ಈ ವೇಳೆ ಪೊಲೀಸರು ಮಹಿಳೆ ಜತೆಗೆ ಕೆಲಸ ಮಾಡುತ್ತಿದ್ದ ಬೈಕ್ ಸವಾರನಿಗೆ ನೀವು ಈ ರೀತಿ ವರ್ತಿಸಿದರೆ ಜೈಲಿಗೆ ಕಳುಹಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದರು. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಲೇ ಕನ್ನಡ ಪರ ಸಂಘಟನೆಗಳಿಂದ ಆಕ್ರೋಶ ಕೇಳಿ ಬಂದಿದ್ದು, ಮಹಿಳೆ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *