Breaking
12 May 2026, Tue

ಬೆಂಗಳೂರಿನಲ್ಲಿ ಅಗ್ನಿ ದುರಂತ: ಒಂದೇ ಕುಟುಂಬದ ನಾಲ್ವರು ಸೇರಿ ಒಟ್ಟು ಐದು ಮಂದಿ ಸಾವು

ಬೆಂಗಳೂರು: ವಾಣಿಜ್ಯ ಕಟ್ಟಡದಲ್ಲಿ ಅಗ್ನಿ ದುರಂತ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಸೇರಿ ಒಟ್ಟು ಐದು ಮಂದಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೆ.ಆರ್ ಮಾರ್ಕೆಟ್ ಬಳಿ ನಡೆದಿದೆ.

ಕೆ.ಆರ್ ಮಾರ್ಕೆಟ್ ಪೇಟೆಯ ನಗರ್ತಪೇಟೆಯ ವಾಣಿಜ್ಯ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಇದರಲ್ಲಿ ಒಂದೇ ಕುಟುಂಬದವರಾದ ಪತಿ ಮದನ್(38) ಪತ್ನಿ ಸಂಗೀತಾ(33), ವಿಹಾನ್(8) ಮೃತಪಟ್ಟಿದ್ದಾರೆ.

ಇದೇ ವೇಳೆ ಮತ್ತೊಂದು ಮಹಡಿಯಲಿದ್ದ ಸುರೇಶ್ ಎಂಬವರೂ ಸುಟ್ಟು ಕರಕಲಾಗಿದ್ದಾರೆ. ಬೆಂಕಿ ಹೊತ್ತಿಕೊಂಡ ಕೂಡಲೇ ಕಟ್ಟಡದಲ್ಲಿದ್ದ ಬಹುತೇಕ ಜನ ಓಡಿ ಹೋಗಿದ್ದಾರೆ. ಆದರೆ ಒಂದು ಫ್ಯಾಮಿಲಿ ಮಾತ್ರ ಬೆಂಕಿ ಕೆನ್ನಾಲಿಗೆಗೆ ಸಿಲುಕಿಕೊಂಡಿದೆ.

ಈಗಾಗಲೇ ಎರಡು ಮೃತದೇಹಗಳನ್ನು ಹೊರ ತೆಗೆಯಲಾಗಿದ್ದು ಅಗ್ನಿಶಾಮಕ ಸಿಬ್ಬಂದಿ, ವಿಧಿವಿಜ್ಞಾನ ಪ್ರಯೋಗಾಲಯ ಅಧಿಕಾರಿಗಳು ಹಾಗೂ ರಕ್ಷಣಾ ತಂಡದವರು ಕಾರ್ಯಾಚರಣೆ ಮುಂದುವರೆಸಿದ್ದಾರೆ. ಘಟನಾ ಸ್ಥಳದಲ್ಲಿ ಇನ್ನಷ್ಟು ಅಂಬುಲೆನ್ಸ್ಗಳನ್ನು ನಿಯೋಜನೆ ಮಾಡಲಾಗಿದ್ದು ಇನ್ನಷ್ಟು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

Leave a Reply

Your email address will not be published. Required fields are marked *