ಕಲ್ಲಡ್ಕ : ಸುರಕ್ಷಾ ಸಂಗಮ ಪೂರ್ಲಿಪ್ಪಾಡಿ ವತಿಯಿಂದ 79ನೇ ಸ್ವಾತಂತ್ರೋತ್ಸವನ್ನು ಸಂಭ್ರಮದಿಂದ ಆಚರಿಸಲಾಯಿತು.
ಧ್ವಜಾರೋಹಣ ಮಾಡಿ ರಾಷ್ಟ್ರಗೀತೆ ಹಾಡುವುದರ ಮೂಲಕ ಉತ್ಸವಕ್ಕೆ ಚಾಲನೆ ನೀಡಲಾಯಿತು.

ಮಾಜಿ ಶಾಸಕರಾದ ಎ. ರುಕ್ಮಯ ಪೂಜಾರಿಯವರು ಸ್ವಂತಂತ್ರದ ಮಹತ್ವವನ್ನು ತಿಳಿಸಿ ಸಂಘದ ಸದಸ್ಯರನ್ನು ಅಭಿನಂದಿಸಿದರು.
ಈ ಸಂದರ್ಭ ಗೌರವಾಧ್ಯಕ್ಷರಾದ ವೆಂಕಟ್ರಯ ಪ್ರಭು,ಸಂಘದ ಅಧ್ಯಕ್ಷರಾದ ನಿತಿನ್ ಕುಮಾರ್, ಚೆನ್ನಪ್ಪ ಕೋಟ್ಯಾನ್ ತೋಟ, ಕೆ .ಎನ್.ಬಿ ಮಾಲಕರಾದ ನವಾಜ್, ಚಂದ್ರಶೇಖರ ಸಾಲ್ಯಾನ್ ಉಪಸ್ಥಿತರಿದ್ದರು.
ಯೋಗೀಶ್ ತೋಟ ಕಾರ್ಯಕ್ರಮ ನಿರ್ವಹಿಸಿದರು.



