Breaking
20 Sep 2026, Sun

ಇನ್ನೋವಾ ಕಾರಿಗೆ ಲಾರಿ ಡಿಕ್ಕಿ: ಪ್ರಾಣಾಪಾಯದಿಂದ ಪಾರು

ಉಡುಪಿ: ನಿಂತಿದ್ದ ಇನ್ನೋವಾ ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಇಬ್ಬರು ಅಪಾಯದಿಂದ ಪಾರಾದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ತೆಕ್ಕಟ್ಟೆಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ತಡರಾತ್ರಿ ನಡೆದಿದೆ.

ತೆಕ್ಕಟ್ಟೆ ಶ್ರೀ ಗಣೇಶ್ ಸಿಲ್ಕ್ ನ ವ್ಯವಸ್ಥಾಪಕ ನಿರ್ದೇಶಕ (57ವ) ಅನಂತ್ ನಾಯಕ್ ಮತ್ತು ಅವರ ಮಗ ಅನೂಪ್ ನಾಯಕ್ (23ವ) ಅವರು ಇರುವ ಕಾರಿಗೆ ಲಾರಿ ಡಿಕ್ಕಿ ಹೊಡೆದಿದ್ದು ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ವೇಳೆ ಪುಣೆಯಿಂದ ಮಂಗಳೂರಿಗೆ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಕಾರಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ಇವರಿಬ್ಬರು ಕೋಟೇಶ್ವರ ಶ್ರೀ ಪಟ್ಟಾಭಿ ರಾಮಚಂದ್ರ ದೇವಸ್ಥಾನಕ್ಕೆ ಭಜನತೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ತಮ್ಮ ಇನೋವಾ ಕಾರಿನಲ್ಲಿ ತೆರಳುತಿದ್ದು, ತಮ್ಮ ಜೊತೆ ದೇವಸ್ಥಾನಕ್ಕೆ ಬರುವ ಇನ್ನೋರ್ವ ವ್ಯಕ್ತಿಗಾಗಿ ಕಾರನ್ನು ರಸ್ತೆ ಬದಿಯಲ್ಲಿ ಪಾರ್ಕಿಂಗ್ ಮಾಡಿ ಕಾಯುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

ಕೋಟ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ

Leave a Reply

Your email address will not be published. Required fields are marked *