Breaking
19 Sep 2026, Sat

ಧರ್ಮಸ್ಥಳ ಗ್ರಾಮದಲ್ಲಿ ಗುಂಡಿ ಅಗೆಯುವ ಕೆಲಸಕ್ಕೆ ತಾತ್ಕಾಲಿಕ ಬ್ರೇಕ್..?

ಧರ್ಮಸ್ಥಳ: ಗ್ರಾಮದಲ್ಲಿ ನೂರಾರು ಶವಗಳನ್ನು ಹೊತ್ತಿಟ್ಟ ಪ್ರಕರಣದಲ್ಲಿ ಎಸ್ಐಟಿ ನೇತೃತ್ವದಲ್ಲಿ ನಡೆಯುತ್ತಿದ್ದ ಗುಂಡಿ ಅಗೆಯುವ ಕೆಲಸಕ್ಕೆ ತಾತ್ಕಾಲಿಕವಾಗಿ ಬ್ರೇಕ್ ಬಿದ್ದಿದೆ ಅನ್ನುವ ಮಾಹಿತಿಗಳು ಲಭ್ಯವಾಗಿದೆ.

ಒಟ್ಟು 17 ಜಾಗದಲ್ಲಿ ಗುಂಡಿ ತೆಗೆದ ಕಾರ್ಮಿಕರನ್ನು ವಿಶೇಷ ತನಿಖಾ ತಂಡ ಇಂದು ಬೆಳ್ತಂಗಡಿ ಠಾಣೆಗೆ ಕರೆಸಿ ಸಹಿ ಪಡೆದುಕೊಂಡಿದ್ದು, ಮುಂದಿನ ದಿನಗಳಲ್ಲಿ ಅಗತ್ಯವಿದ್ದರೆ ಕರೆಸುತ್ತೇವೆ ಎಂದು ಎಸ್ಐಟಿ ಹೇಳಿದೆ ಎಂದು ತಿಳಿದು ಬಂದಿದೆ.

ಈ ಪ್ರಕರಣದಲ್ಲಿ ಧರ್ಮಸ್ಥಳ, ಬೆಳ್ತಂಗಡಿ, ವೇಣೂರು ಕಾರ್ಮಿಕರ ಜೊತೆ ಉತ್ತರ ಭಾರತ ಮೂಲದ ಕಾರ್ಮಿಕರು ಮೂಳೆ ಹುಡುಕುವ ಕೆಲಸ ಮಾಡಿದ್ದರು.

ಇದರ ಜೊತೆಗೆ ಮುಸುಕುಧಾರಿಯನ್ನು ಠಾಣೆಗೆ ಕರೆಸಿಕೊಂಡ ಎಸ್ಐಟಿ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಿ ಬಳಿಕ ಕಳುಹಿಸಿ ಕೊಟ್ಟಿದ್ದಾರೆ ಅನ್ನುವ ಮಾಹಿತಿ ಲಭ್ಯವಾಗಿದೆ.

Leave a Reply

Your email address will not be published. Required fields are marked *