Breaking
29 Jun 2026, Mon

ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡ ಆರೋಪಿ ಅರೆಸ್ಟ್

ಸುಳ್ಯ: ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡ ಆರೋಪಿಯನ್ನು ಬೆಳ್ಳಾರೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ಉನ್ಮೇಶ ಎಂದು ಗುರುತಿಸಲಾಗಿದೆ.

ಈತ ಕಳ್ಳತನ ಪ್ರಕರಣವೊಂದರಲ್ಲಿ ಆರೋಪಿ ಎಂದು ಹೇಳಲಾಗುತ್ತಿದ್ದು, ನ್ಯಾಯಾಲಯಕ್ಕೆ ಹಾಜರಾಗದೇ ತಪ್ಪಿಸಿಕೊಂಡು ತಿರುಗಾಡುತ್ತಿದ್ದ. ಆರೋಪಿ ಕೇರಳದಲ್ಲಿ ಇರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿ ನ್ಯಾಯಾಲಕ್ಕೆ ಹಾಜರು ಪಡಿಸಿದ್ದಾರೆ.


ಆರೋಪಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply

Your email address will not be published. Required fields are marked *