Breaking
19 Sep 2026, Sat

ಕಳ್ಳತನ ಪ್ರಕರಣ: ಸೊತ್ತು ಸಹಿತ ಆರೋಪಿ ಪೊಲೀಸ್ ವಶಕ್ಕೆ

ಪುತ್ತೂರು : ನಗರದ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಈಶ್ವರಮಂಗಲದ ಮನೆಯೊಂದರಲ್ಲಿ ನಡೆದ ಕಳ್ಳತನ ಪ್ರಕರಣವೊಂದಕ್ಕೆ ಸಂಬಂಧಪಟ್ಟಂತೆ ಸೊತ್ತು ಸಹಿತ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ಪುತ್ತೂರು, ನೆಟ್ಟಣಿಗೆ ಮುಡೂರು ಗ್ರಾಮದ ನಿವಾಸಿ ದಯಾನಂದ್ ನಾಯ್ಕ(29) ಎಂದು ಗುರುತಿಸಲಾಗಿದೆ.

ಆರೋಪಿಯಿಂದ 30.120 ಗ್ರಾಂ ಬಂಗಾರ ಮತ್ತು ಪ್ರಕರಣಕ್ಕೆ ಉಪಯೋಗಿಸಿದ ಡಿಸ್ಕವರಿ ಬೈಕ್ ನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಈ ಕುರಿತು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *