ನಮ್ಮ ದಾಂಪತ್ಯ ಜೀವನವನ್ನು ಮತ್ತೆ ನಿಮಿ೯ಸಿಕೊಳ್ಳುತ್ತೇವೆ ನಟ ಅಜಯ್ ರಾವ್ ಪತ್ನಿ ಭಾವನಾತ್ಮಕ ಪೋಸ್ಟ್

ಬೆಂಗಳೂರು: ಸ್ಯಾಂಡಲ್ ವುಡ್ ನಟ ಅಜಯ್ ರಾವ್, ಪತ್ನಿ ಸ್ವಪ್ನ ರಾವ್ ಮತ್ತೆ ಒಂದಾಗುತ್ತಿದ್ದಾರೆ ಅನ್ನುವ ಮಾಹಿತಿ ಲಭ್ಯವಾಗಿದೆ.

ಶನಿವಾರ ನಟ ಅಜಯ್ ರಾವ್ ವಿರುದ್ಧ ಅವರ ಪತ್ನಿ ಸಪ್ನಾ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ ದೂರು ದಾಖಲಿಸಿದ್ದು, ಮಗಳು ಕೂಡ ಅಜಯ್ ರಾವ್ ವಿರುದ್ಧ ದೂರು ದಾಖಲಿಸಿದ್ದಾರೆ ಅಂತ ಹೇಳಲಾಗಿತ್ತು. ಈ ವಿಚಾರ ಅಭಿಮಾನಿಗಳಲ್ಲಿ ಭಾರೀ ಬೇಸರವನ್ನು ಕೂಡ ಉಂಟು ಮಾಡಿತ್ತು.

ಸದ್ಯ ಈ ವಿಚಾರಕ್ಕೆ ಸಂಬಂಧಪಟ್ಟಂತೆ ಸ್ವಪ್ನ ಅವರು ಒಂದು ಪೋಸ್ಟ್ ನ್ನು ಹಂಚಿಕೊಂಡಿದ್ದು ಇದರಲ್ಲಿ ನಮಸ್ಕಾರ.. ತಾಯಿಯಾಗಿ ನನ್ನ ಮೊದಲ ಜವಾಬ್ದಾರಿ ನನ್ನ ಮಗಳ ಸುರಕ್ಷತೆ, ಗೌರವ ಮತ್ತು ಅವಳ ಭವಿಷ್ಯಕ್ಕಾಗಿ ನಾನು ಪ್ರತಿದಿನ ಧೈರ್ಯವನ್ನು ಕೊಡಿಸಿ ನನಗೆ ತೀವ್ರವಾಗಿ ಪರೀಕ್ಷಿಸುವ ಸವಾಲುಗಳನ್ನು ಎದುರಿಸುತ್ತಿದ್ದೇನೆ. ಪ್ರಿಯ ಸ್ನೇಹಿತರೆ ಮತ್ತು ಸಹೋದರರೆ, ಈ ಹಂತದಲ್ಲಿ ನಾನು ಮತ್ತು ನನ್ನ ಮಗಳು ನಮ್ಮ ಬದುಕನ್ನು ಪುನರ್ ನಿರ್ಮಿಸಿಕೊಳ್ಳಲು ಮತ್ತು ನಮ್ಮ ದಾಂಪತ್ಯ ಜೀವನವನ್ನು ಪುನಃ ನಿರ್ಮಿಸಿಕೊಳ್ಳಲು ನಿಮ್ಮ ಹಾರೈಕೆಗಳು ಮತ್ತು ಪ್ರಾರ್ಥನೆಗಳನ್ನು ನಿಮ್ಮಲ್ಲಿ ಕೇಳಿಕೊಳ್ಳುತ್ತಿದ್ದೇನೆ. ನಾನು ಅತ್ಯಂತ ಗೌರವದಿಂದ ತಿಳಿಸಲು ಬಯಸುವುದು ಏನೆಂದರೆ ಈ ವಿಷಯವು ನಮ್ಮ ವೈಯಕ್ತಿಕ ಆಳವಾದ ಭಾವನಾತ್ಮಕ ಮತ್ತು ದಾಂಪತ್ಯ ಜೀವನಕ್ಕೆ ಮಾತ್ರ ಸಂಬಂಧಿಸಿದ್ದು ಹೊರತು ಬೇರೆ ಯಾವುದೇ ರೀತಿಯಲ್ಲಿ ಸಂಬಂಧಿಸಿಲ್ಲ ಎಂದು ತಿಳಿಸಲು ಬಯಸುತ್ತೇನೆ ಕೃತಜ್ಞತೆಗಳೊಂದಿಗೆ ಸ್ವಪ್ನ ಅಜಯ್ ರಾವ್ ಎಂದು ಬರೆದುಕೊಂಡಿದ್ದಾರೆ.

ಎಕ್ಸ್ಕ್ಯೂಸ್ ಮಿ ಚಿತ್ರದ ಮೂಲಕ ನಟ ಅಜಯ್ ರಾವ್ ಸ್ಯಾಂಡಲ್ವುಡ್ಗೆ ಪಾದಾರ್ಪಣೆ ಮಾಡಿದ್ದರು. 2014 ಡಿಸೆಂಬರ್ 18ರಂದು ಈ ಜೋಡಿ ಪ್ರೀತಿಸಿ ಮದುವೆಯಾಗಿ ಹೊಸಪೇಟೆಯಲ್ಲಿ ಸರಳವಾಗಿ ದಾಂಪತ್ಯ ಜೀವನಕ್ಕೆ ಕೂಡ ಕಾಲಿಟ್ಟಿತ್ತು.ಇವರಿಬ್ಬರ ಪ್ರೀತಿಯ ದ್ಯೋತಕವಾಗಿ ಚರಿಷ್ಮಾ ಅನ್ನುವ 11 ವರ್ಷ ಮಗಳಿದ್ದು, ಇತ್ತೀಚೆಗೆ ಹೊಸ ಮನೆಯ ಗ್ರಹಪ್ರವೇಶ ಕೂಡ ಈ ಜೋಡಿ ಮಾಡಿತ್ತು.

Leave a Reply

Your email address will not be published. Required fields are marked *