ಬಂಟ್ವಾಳ: ಪಾಣೆಮಂಗಳೂರು ಸುಮಂಗಲಾ ಸಭಾಂಗಣದಲ್ಲಿ ಮಂಗಳೂರು ವಿಶ್ವ ಗಾಣಿಗರ ಚಾವಡಿ ಮತ್ತು ಮುಂಬೈ ಶ್ರೀನಿವಾಸ್ ಫೌಂಡೇಶನ್ ವತಿಯಿಂದ ಅರ್ಹ ವಿದ್ಯಾರ್ಥಿಗಳಿಗೆ ‘ಗೇನದ ತುಡರ್ ನಿಧಿ’ ಶೈಕ್ಷಣಿಕ ನೆರವನ್ನು ಆ.17 ರಂದು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಫೌಂಡೇಶನ್ ಅಧ್ಯಕ್ಷ ಶ್ರೀನಿವಾಸ ಪಿ.ಸಪಲ್ಯ ರಾಯಿ, ಗಾಣಿಗರ ಸೇವಾ ಸಂಘದ ಅಧ್ಯಕ್ಷ ಕೃಷ್ಣಪ್ಪ ಗಾಣಿಗ, ಸುಮಂಗಲಾ ಕ್ರೆಡಿಟ್ ಸೊಸೈಟಿ ಅಧ್ಯಕ್ಷ ನಾಗೇಶ ಕಲ್ಲಡ್ಕ, ವಿಜಿಸಿ ಅಧ್ಯಕ್ಷ ಹರಿಪ್ರಸಾದ್ ಶಕ್ತಿನಗರ ಮತ್ತಿತರರು ಉಪಸ್ಥಿತರಿದ್ದರು.




