Breaking
21 Jun 2026, Sun

ಉದ್ಯಮಿ ಕೃಷ್ಣರಾಜ್ ಹೆಗ್ಡೆ ವಿಷ ಸೇವಿಸಿ ಆತ್ಮಹತ್ಯೆ

ಉಡುಪಿ: ಉದ್ಯಮಿ ಕೃಷ್ಣರಾಜ್ ಹೆಗ್ಡೆ (45) ಆತ್ರಾಡಿಯಲ್ಲಿರುವ ತಮ್ಮ ಮನೆಯಲ್ಲೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆ.19 ರಂದು ನಡೆದಿದೆ.

ಬೈಲೂರು ಮೂಲದ ಕೃಷ್ಣರಾಜ್ ಹೆಗ್ಡೆ ಆತ್ರಾಡಿಯಲ್ಲಿ ವಾಸವಿದ್ದು, ಮಣಿಪಾಲದಲ್ಲಿ ಹೋಟೆಲ್ ವ್ಯವಹಾರ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ. ಅವರು ಬೈಲೂರಿನಲ್ಲಿ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದರು.

ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಮೃತರು ತಾಯಿ, ಪತ್ನಿ ಮತ್ತು ಒಬ್ಬ ಮಗನನ್ನು ಅಗಲಿದ್ದಾರೆ.

ಘಟನಾ ಸ್ಥಳಕ್ಕೆ ಹಿರಿಯಡ್ಕ ಪೊಲೀಸರು ಭೇಟಿ ನೀಡಿ ಪ್ರಕರಣದ ಬಗ್ಗೆ ತನಿಖೆ ನಡೆಸಿದ್ದಾರೆ.

Leave a Reply

Your email address will not be published. Required fields are marked *