Breaking
7 May 2026, Thu

ಬೈಕ್ ಗೆ ಹಾಲಿನ ವಾಹನ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸಾವು

ಶಿವಮೊಗ್ಗ: ಬೈಕ್ ಗೆ ಹಾಲಿನ ವಾಹನ ಡಿಕ್ಕಿಯಾಗಿ ಬೈಕ್ ಸವಾರರು ಮೃತಪಟ್ಟ ಘಟನೆ ಶಿವಮೊಗ್ಗದಲ್ಲಿ ಇಂದು (ಆ. 20) ರಂದು ನಡೆದಿದೆ.

ಮೃತಪಟ್ಟವರನ್ನು ಮೂರನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳಾದ ಉಡುಪಿಯ ಆದಿತ್ಯ(22) ಮತ್ತು ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಸಂದೀಪ್ (22) ಎಂದು ಗುರುತಿಸಲಾಗಿದೆ.

ವಿದ್ಯಾರ್ಥಿಗಳಿಬ್ಬರು ಬೆಳಗಿನ ಜಾವ ಬೈಕ್‌ಗೆ ಪೆಟ್ರೋಲ್ ತುಂಬಿಸಿಕೊಂಡು ವಾಪಸ್ ಕಾಲೇಜಿನ ಹಾಸ್ಟೆಲ್‌ಗೆ ಹಿಂದಿರುಗುವಾಗ ಹಾಲಿನ ವಾಹನ ಡಿಕ್ಕಿಯಾಗಿದ್ದು , ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಮೃತದೇಹಗಳನ್ನು ಮೆಗ್ಗಾನ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.

Leave a Reply

Your email address will not be published. Required fields are marked *