Breaking
7 May 2026, Thu

ಬಂಟ್ವಾಳ: ಆಗಸ್ಟ್ 23ರಿಂದ ಸುಳ್ಳಮಲೆ ಗುಹತೀರ್ಥ ಸ್ನಾನ

ಬಂಟ್ವಾಳ: ಪ್ರತಿವರ್ಷ ನಡೆಯುವ ಐತಿಹಾಸಿಕ ಧಾರ್ಮಿಕ ಹಿನ್ನೆಲೆಯುಳ್ಳ ಸುಳ್ಳಮಲೆ ಗುಹಾತೀರ್ಥ ಸ್ನಾನ ಆ. 23 ನೇ ಶನಿವಾರದಿಂದ ಆ. 27 ನೇ ಬುಧವಾರದ ಭಾದ್ರಪದ ಶುಕ್ಲ ಚೌತಿಯವರಗೆ ನಡೆಯಲಿದೆ.

ಸೋಣ ಅಮಾವಾಸ್ಯೆಯಂದು ಬಿದಿರಿನ ಕೇರ್ಪು (ಏಣಿ) ಇಡುವ ಸಂಪ್ರದಾಯದ ಬಳಿಕ ಅರಸು ಶ್ರೀ ಗುಡ್ಡೆಚಾಮುಂಡಿ ಮತ್ತು ಪ್ರಧಾನಿ ಶ್ರೀ ಪಂಜುರ್ಲಿ ದೈವಗಳಿಗೆ ತಂಬಿಲ ಸೇವೆ ನಡೆದ ನಂತರ ಭಕ್ತಾದಿಗಳಿಗೆ ತೀರ್ಥ ಸ್ನಾನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ.

ತೀರ್ಥ ಸ್ನಾನಕ್ಕೆ ಬರುವ ಭಕ್ತಾದಿಗಳು ಸಾಂಪ್ರದಾಯಿಕ ಉಡುಪುಗಳನ್ನು ಧರಿಸಿಕೊಂಡು ಬರುವ ಮೂಲಕ ತೀರ್ಥ ಕ್ಷೇತ್ರದ ಪಾವಿತ್ರ್ಯತೆಯನ್ನು ಕಾಪಾಡಬೇಕಾಗಿ ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನ ಆಡಳಿತ ಮೊಕ್ತಸರ ಸಚಿನ್ ರೈ ಮಾಣಿಗುತ್ತು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *