ಪುತ್ತೂರು: ವಿವಾಹದ ಆಮೀಷವೊಡ್ಡಿ ಲೈಂಗಿಕವಾಗಿ ಬಳಸಿಕೊಂಡು ಬಳಿಕ ಮದುವೆಯಾಗುವುದಕ್ಕೆ ನಿರಾಕರಣೆ ಮಾಡಿದ ಆರೋಪ ಎದುರಿಸುತ್ತಿರುವ ಕೃಷ್ಣ ಜೆ. ರಾವ್ ನ ಮೇಲೆ ಬ್ಲಾಕ್ ಮೇಲ್ ಆರೋಪ ಕೇಳಿಬಂದಿದೆ.

ಈ ವಿಚಾರಕ್ಕೆ ಸಂಬಂಧಪಟ್ಟಂತೆ ಸಂತ್ರಸ್ತೆ ಯುವತಿಯ ತಾಯಿ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿದ್ದು, ಆರೋಪಿ ಕೃಷ್ಣ ಜೆ. ರಾವ್ ಮಗಳ ಬಳಿ ʼನಿನ್ನ ಖಾಸಗಿ ವಿಡಿಯೋ ಇದೆ. ನಾನು ಕರೆದಾಗ ನೀನು ಬರದಿದ್ದರೆ ಅದನ್ನು ವೈರಲ್ ಮಾಡುತ್ತೇನೆʼ ಎಂದು ಬ್ಲಾಕ್ ಮೇಲ್ ಮಾಡಿ ಪದೇ ಪದೇ ಕರೆಸಿಕೊಳ್ಳುತ್ತಿದ್ದ ಎಂದು ಆರೋಪಿಸಿದ್ದಾರೆ.

ಮಂಗಳವಾರ ಈ ಪ್ರಕರಣದ ಮುಂದುವರಿದ ಭಾಗವಾಗಿ ಮಹತ್ವದ ಬೆಳವಣಿಗೆಯಾಗಿದ್ದು, ಪುತ್ತೂರಿನ ಸರಕಾರಿ ಆಸ್ಪತ್ರೆಯಲ್ಲಿ ಸಂತ್ರಸ್ತೆ ಯುವತಿ, ಮಗು, ಕೃಷ್ಣ ಜೆ. ರಾವ್ ನ ರಕ್ತದ ಮಾದರಿಗಳನ್ನು ಸಂಗ್ರಹಿಸಲಾಗಿದೆ.
ಬಳಿಕ ಅದನ್ನು ಡಿ.ಎನ್ಎ ಪರೀಕ್ಷೆಗಾಗಿ ಬೆಂಗಳೂರು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿ ಕೊಡಲಾಗಿದೆ.

ಮಹಿಳಾ ಠಾಣೆಯ ಪೊಲೀಸ್ ಸಿಬ್ಬಂದಿ ಬಸ್ ಗಳ ಮೂಲಕ ಅವುಗಳನ್ನು ಬೆಂಗಳೂರಿಗೆ ಸಾಗಿಸಿದ್ದು, ಸಂತ್ರಸ್ತೆಯ ತಾಯಿಯೂ ಕೂಡ ಮಾದರಿಗಳ ಭದ್ರತೆಗಾಗಿ ಅವರೊಂದಿಗೆ ತೆರಳಿದ್ದಾರೆ.
ಒಂದು ವಾರದಲ್ಲಿ ಎಫ್ಎಸ್ಎಲ್ ವರದಿ ಬರುವ ಸಾಧ್ಯತೆ ಇದೆ ಎನ್ನಲಾಗಿದೆ.



