ಚಾಮರಾಜನಗರ: ಬನ್ನಿತಾಳಪುರ ಗ್ರಾಮದಲ್ಲಿ 6 ವರ್ಷದ ಬಾಲಕ ಲೋ ಬಿಪಿಯಿಂದ ಮೃತಪಟ್ಟ ಘಟನೆ ನಡೆದಿದೆ.
ಮೃತ ಬಾಲಕ ಒಂದನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಈತನಿಗೆ ಹೃದಯಕ್ಕೆ ಸಂಬಂಧಿಸಿದ ಸಮಸ್ಯೆಯೂ ಇತ್ತು ಎಂದು ತಿಳಿದುಬಂದಿದೆ.

ಈ ಬಾಲಕನ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಕೂಡಲೇ ಗುಂಡ್ಲುಪೇಟೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದ್ದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಚಾಮರಾಜನಗರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಬಾಲಕ ಮೃತಪಟ್ಟಿದ್ದಾನೆ ಎನ್ನಲಾಗಿದೆ.




