Breaking
26 Sep 2026, Sat

ಉರಿಮಜಲಿನಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ವಿಟ್ಲ: ಉರಿಮಜಲು ಎಂಬಲ್ಲಿ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆ. 20 ರಂದು ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯನ್ನು ಉರಿಮಜಲು ನಿವಾಸಿ ಗಣೇಶ್ ಆಚಾರ್ಯ (42) ಎಂದು ಗುರುತಿಸಲಾಗಿದೆ.

ಲೈಟಿಂಗ್ ಕೆಲಸ ಮಾಡಿಕೊಂಡಿದ್ದ ಇವರು ತನ್ನ ಮನೆ ಸಮೀಪದ ಮರವೊಂದಕ್ಕೆ ಹಗ್ಗ ಕಟ್ಟಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತರು ಪತ್ನಿ ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ. ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.

Leave a Reply

Your email address will not be published. Required fields are marked *