Breaking
19 Sep 2026, Sat

ಉಡುಪಿ: 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಕೇರಳದಲ್ಲಿ ಅರೆಸ್ಟ್‌

ಉಡುಪಿ: 7 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಕೇರಳದ ಕಲ್ಲಿಕೋಟೆಯಲ್ಲಿ ಪೊಲೀಸರು ಬಂಧಿಸಿದ್ದಾರೆ.

ಮೈಸೂರು ಜಿಲ್ಲೆಯ ಉದಯಗಿರಿ ಶಾಂತಿನಗರ ಆರನೇ ಕ್ರಾಸ್ ನಿವಾಸಿ ಫೈರೋಜ್ ಖಾನ್ ಎಂಬಾತನ ಮೇಲೆ ಕಳವು ಮತ್ತು ಕದ್ದ ಸೊತ್ತುಗಳನ್ನು ಸ್ವಾಧೀನ ಇರಿಸಿಕೊಂಡಿದ್ದ ಆರೋಪದ ಮೇರೆಗೆ 2017 ರಲ್ಲಿ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬಳಿಕ 2018 ರಲ್ಲಿ ಜಾಮೀನಿನಲ್ಲಿ ಬಿಡುಗಡೆಯಾಗಿದ್ದ ಈತ ನಂತರ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ.

ಆರೋಪಿ ಕೇರಳ ರಾಜ್ಯದಲ್ಲಿ ಅಡಗಿಕೊಂಡಿರುವ ಬಗ್ಗೆ ಮಾಹಿತಿ ಪಡೆದ ಪಡುಬಿದ್ರೆ ಠಾಣೆಯ ಪೊಲೀಸರು ಆತನನ್ನು ಪತ್ತೆ ಹಚ್ಚಿ ದಸ್ತಗಿರಿ ಮಾಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Leave a Reply

Your email address will not be published. Required fields are marked *