Breaking
22 Mar 2026, Sun

ಮುತ್ತೂಟ್ ಫೈನಾನ್ಸ್ ಬ್ಯಾಂಕ್ ಕಳ್ಳತನ ಯತ್ನ ಪ್ರಕರಣ; ತಲೆಮರೆಸಿಕೊಂಡ ಅಬ್ದುಲ್‌ ಲತೀಫ್‌ ಸಿಸಿಬಿ ಬಲೆಗೆ

ಮಂಗಳೂರು: ದೇರಳಕಟ್ಟೆ ವ್ಯಾಪ್ತಿಯ ಹೆಚ್.ಎಮ್ ಕಾಂಪ್ಲೆಕ್ಸ್ ನ ಮುತ್ತೂಟ್ ಫೈನಾನ್ಸ್ ಕಚೇರಿಯ ಮುಂದಿನ ಬಾಗಿಲಿನ ಸೈರನ್ ಹೂಟರ್ ನ ಕೇಬಲನ್ನು ತುಂಡು ಮಾಡಿ ಫೈನಾನ್ಸ್ ಕಂಪನಿಯಲ್ಲಿ ಕಳವು ಮಾಡಲು ಯತ್ನಿಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಕಳ್ಳತನ ಪ್ರಕರಣದಲ್ಲಿ ಕೇರಳ ಇಡುಕ್ಕಿ ಮೂಲದ ಮುರಳಿ ಮತ್ತು ಕಾಂಞಿಗಾಡ್ ನ ಆರ್ಷದ್ ಎಂಬಾತರು ಪ್ರಮುಖ ದಸ್ತಗಿರಿಯಾಗಿರುತ್ತಾರೆ.

ಈ ಪ್ರಕರಣದ ಬಳಿಕ ಪತ್ತೆಯಾಗದೇ ತಲೆಮರೆಸಿಕೊಂಡಿದ್ದ ಮಂಡಿಯಾನ್ ಮನೆ ನಿವಾಸಿ ಅಬ್ದುಲ್ ಲತೀಫ್ ಯಾನೆ ಲತೀಫ್ ಈ ಹಿಂದೆ ಕೇರಳ ರಾಜ್ಯದ ಹೊಸದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯ ರಾಜಧಾನಿ ಜುವೆಲ್ಲರಿ ಶಾಪ್ ನ ಸುಮಾರು 20 ಕೆಜಿ ಬಂಗಾರವನ್ನು ಕಳವು ಮಾಡಿದ ಪ್ರಕರಣದಲ್ಲಿಯೂ, ಕೇರಳ ರಾಜ್ಯದ ಚಂದೇರ್ ಪೊಲೀಸ್ ಠಾಣಾ ವ್ಯಾಪ್ತಿಯ ಚೆರವತ್ತೂರು ವಿಜಯ ಬ್ಯಾಂಕ್ ನ ಸುಮಾರು 15.80 ಕೆಜಿ ಬಂಗಾರ ಮತ್ತು 2.5 ಲಕ್ಷ ರೂ. ನಗದು ಕಳವು ಮಾಡಿದ ಪ್ರಕರಣಗಳಲ್ಲಿ ಪ್ರಮುಖ ಆರೋಪಿಯಾಗಿದ್ದಾನೆ. ಇವನನ್ನು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮದ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

Leave a Reply

Your email address will not be published. Required fields are marked *