Breaking
22 Mar 2026, Sun

ವ್ಯಕ್ತಿಯೋರ್ವನ ಮೇಲೆ ಮಾರಣಾಂತಿಕ ಹಲ್ಲೆ ಮೂವರ ವಿರುದ್ದ ಪ್ರಕರಣ ದಾಖಲು

ಸುಳ್ಯ: ವ್ಯಕ್ತಿಯೋರ್ವನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಆಲೆಟ್ಟಿ ಗ್ರಾಮದ ಅರಂಬೂರಿನಲ್ಲಿಆ.20ರಂದು ನೆಡದಿದೆ.

ಅರಂಬೂರಿನ ಸರಳಿಕುಂಜ ನಿವಾಸಿ ವಿಠಲ ರವರ ಮಗ ಪುನೀತ್ ಹಲ್ಲೆಗೊಳಗಾದ ಯುವಕ. ರಾತ್ರಿ ಗಂಟೆ 9.30 ರ ವೇಳೆಗೆ ಆರಂಬೂರಿನಲ್ಲಿರುವ ಮನೆಗೆ ನಾಲ್ವರು ಯುವಕರು ಬೈಕಿನಲ್ಲಿ ಏಕಾಏಕಿಯಾಗಿ ಬಂದು ತಲ್ವಾರಿನಿಂದ ಮತ್ತು ಕಬ್ಬಿಣದ ರಾಡಿನಿಂದ ಹಲ್ಲೆ ನಡೆಸಿದ್ದಾರೆ ಎಂದು ದೂರಲಾಗಿದೆ. ತಲೆಯ ಭಾಗಕ್ಕೆ ಏಟಾಗಿದ್ದು ಪುನೀತ್ ರವರನ್ನು ಸುಳ್ಯದ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ನೀಡಲಾಗುತ್ತಿದೆ.

ಈ ಕುರಿತು  ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಹಲ್ಲೆ ಮಾಡಿದ ಆರೋಪಿಗಳ ಪೈಕಿ ಮನೋಜ್, ಚೈತ್ರೇಶ್, ಶ್ರೀಜಿತ್ ಉಪ್ಪಳ ಎಂಬವರ ಮೇಲೆ ಪ್ರಕರಣ ದಾಖಲಾಗಿದೆ. ಈ ನಡುವೆ ಓರ್ವ ಆರೋಪಿಯ ಬೈಕನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *