ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಮಂಗಳೂರು ಬಂಟ್ವಾಳ ತಾಲೂಕು ಪಂಚಾಯತ್ ವತಿಯಿಂದ ಸಜಿಪಮೂಡ ಗ್ರಾಮಪಂಚಾಯತ್ ನಲ್ಲಿ ಆ.20 ರಂದು ಹರ್ ಘರ್ ಜಲ್ ಕಾರ್ಯಕ್ರಮವು ನಡೆಯಿತು.

ಈ ವೇಳೆ ಬಂಟ್ವಾಳ ತಾಲ್ಲೂಕು ಪಂಚಾಯತ್ ವ್ಯಾಪ್ತಿಯ ಸಜಿಪಮೂಡ ಗ್ರಾಮ ಪಂಚಾಯತ್ ನ ಸಜಿಪಮೂಡ ಗ್ರಾಮವನ್ನು ಹರ್ ಘರ್ ಜಲ್ ಗ್ರಾಮವೆಂದು ಘೋಷಿಸಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ಶೋಭ ಶೆಟ್ಟಿ ಇವರು ಹರ್ ಘರ್ ಜಲ್ ನ್ನು ಘೋಷಿದರು.

ಸಜಿಪಮೂಡ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಫಾಜಿಯಾ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಾಯಾಕುಮಾರಿ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಇಂಜಿನಿಯರ್ ನಾಸಿರ್ ಅವರ ಮಾರ್ಗದರ್ಶನದಲ್ಲಿ ಘೋಷಣೆಯನ್ನು ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಡಿಪಿಎಂ ವಿಘ್ನೇಶ್ ರಾಜ್ ಬಿಕೆ, ಐ ಇ ಸಿ ಸಮನ್ವಯಧಿಕಾರಿ ಧರ್ಮಶ್ರೀ ಕಾರ್ಯಕ್ರಮವನ್ನು ಸಂಯೋಜಿಸಿದರು. ಸಜಿಪಮೂಡ ಗ್ರಾಮ ಪಂಚಾಯತ್ ಸದಸ್ಯರು, ಗ್ರಾಮ ನೀರು ನೈರ್ಮಲ್ಯ ಸಮಿತಿಯ ಸದಸ್ಯರು ಹಾಗೂ ಪಂಚಾಯತ್ ಸಿಬ್ಬಂದಿ ಉಪಸ್ಥಿತರಿದ್ದರು.



