ಉಡುಪಿ: ಸಾಸ್ತಾನ ಕೋಡಿತಲೆ ಬಳಿ ದೋಣಿ ಮಗುಚಿ ಓರ್ವ ಮೀನುಗಾರ ಸಾವನ್ನಪ್ಪಿರುವ ಘಟನೆ ಆ.22 ರಂದು ನಡೆದಿದೆ.
ಮೃತಪಟ್ಟಿರುವ ವ್ಯಕ್ತಿಯನ್ನು ಶರತ್ ಎಂದು ಗುರುತಿಸಲಾಗಿದೆ.

ಮೂವರು ಮೀನುಗಾರರು ಮೀನುಗಾರಿಕೆಗೆ ಸಮುದ್ರಕ್ಕೆ ಎಂದು ತೆರಳಿದ್ದ ವೇಳೆ ಸಮುದ್ರದ ಅಲೆಗಳ ಹೊಡೆತಕ್ಕೆ ದೋಣಿ ಮಗುಚಿ ಬಿದ್ದಿದೆ. ಈ ಪೈಕಿ ಅಕ್ಷಯ್ ಖಾರ್ವಿ ಮತ್ತು ಮಂಜುನಾಥ ಖಾರ್ವಿ ಸುರಕ್ಷಿತವಾಗಿ ದಡ ಸೇರಿದ್ದು, ಶರತ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತು ಕೋಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



