Breaking
22 Mar 2026, Sun

ಕಾಪು: ಭೀಕರ ಕಾರು ಅಪಘಾತ: ಓರ್ವ ಸಾವು

ಕಾಪು: ಭೀಕರ ಕಾರು ಅಪಘಾತದಿಂದ ವ್ಯಕ್ತಿಯೊರ್ವರು ಸಾವನ್ನಪ್ಪಿದ ಘಟನೆ ಮುಳೂರು ಎಂಬಲ್ಲಿ ಸಂಭವಿಸಿದೆ.

ಮೃತರನ್ನು ಛಾಯಾಗ್ರಾಹಕ ಡಿಜೆ ಮರ್ವಿನ್(28) ಎಂದು ಗುರುತಿಸಲಾಗಿದೆ.

ಮರ್ವಿನ್ ಕಾರಿನಲ್ಲಿ ಉಡುಪಿಯಿಂದ ಮಂಗಳೂರಿಗೆ ತನ್ನ ಸ್ನೇಹಿತರಾದ ಪ್ರಜ್ವಲ್ ಸುವರ್ಣ ಮತ್ತು ಪ್ರಸಾದ್ ಅವರೊಂದಿಗೆ ಪ್ರಯಾಣಿಸುತ್ತಿದ್ದ ವೇಳೆ ಎದುರಿಗೆ ಬಂದ ನಾಯಿಯನ್ನು ತಪ್ಪಿಸಲು ಹೋಗಿ ಕಾರು ಪಲ್ಟಿಯಾಗಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.

ಘಟನೆಯಲ್ಲಿ ಪ್ರಜ್ವಲ್ ಮತ್ತು ಪ್ರಸಾದ್ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದು ಆದರೆ ಮರ್ವಿನ್ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತಕ್ಕೆ ಒಂದು ದಿನ ಮೊದಲು, ಮರ್ವಿನ್ ತಮ್ಮ ಹೊಸ ಹಾಡನ್ನು ಯೂಟ್ಯೂಬ್‌ನಲ್ಲಿ ಬಿಡುಗಡೆ ಮಾಡಿದ್ದು, ಅದನ್ನು ಅವರು ಎಪಿಡಿ ಮ್ಯೂಸಿಕ್‌ಗಾಗಿ ನಿರ್ಮಿಸಿ ಸ್ವತಃ ಚಿತ್ರೀಕರಣ ಮಾಡಿದ್ದರು. ಅವರು ಛಾಯಾಗ್ರಾಹಕರಾಗಿ ಹಲವಾರು ಕೊಂಕಣಿ ಮತ್ತು ತುಳು ಚಲನಚಿತ್ರ ಯೋಜನೆಗಳಲ್ಲಿ ಕೆಲಸ ಮಾಡಿದ್ದರು.

Leave a Reply

Your email address will not be published. Required fields are marked *