Breaking
21 Jun 2026, Sun

ಉಡುಪಿ :ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ಪಾದಚಾರಿ ಮೃತ್ಯು

ಉಡುಪಿ : ರಾಷ್ಟ್ರೀಯ ಹೆದ್ದಾರಿ 66ರ ಕಾಪು ಕೊಪ್ಪಲಂಗಡಿಯಲ್ಲಿ ವೇಗವಾಗಿ ಬಂದ ಕಾರೊಂದು ರಸ್ತೆ ದಾಟಲು ನಿಂತಿದ್ದ ವ್ಯಕ್ತಿಯೊಬ್ಬರಿಗೆ ಢಿಕ್ಕಿ ಹೊಡೆದು ವ್ಯಕ್ತಿ ಮೃತಪಟ್ಟ ಘಟನೆ (ಆ.24) ಸಂಜೆ ನಡೆದಿದೆ.

ಮೃತಪಟ್ಟವರು ಕೊಪ್ಪಲಂಗಡಿಯ ಪೀರು ಸಾಹೇಬ್ (70) ಎಂದು ತಿಳಿದುಬಂದಿದೆ.

ಕಾರು ಅತೀವೇಗದಿಂದ ಬಂದು ರಸ್ತೆ ದಾಟಲು ನಿಂತಿದ್ದ ಪೀರು ಸಾಹೇಬ್‌ಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಉಡುಪಿ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ.

ಈ ಕುರಿತು ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *