ಸುಳ್ಯ: ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಆರೋಪದಡಿ ನಾಲ್ಕು ಲಾರಿಗಳನ್ನು ಸುಳ್ಯ ಪೊಲೀಸರು ವಶಪಡಿಸಿಕೊಂಡ ಘಟನೆ ಜಾಲ್ಸೂರು ಗ್ರಾಮದ ಅಡ್ಕಾರಿನಲ್ಲಿ ಆ.24ರಂದು ನಡೆದಿದೆ.

ಮಿಂಚಪದವಿನಿಂದ ಸುಳ್ಯದ ಕಡೆ ಬರುತ್ತಿದ್ದ ಲಾರಿಗಳಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ನಡೆಸುತ್ತಿದ್ದರು ಎನ್ನಲಾಗಿದೆ.
ಈ ಬಗ್ಗೆ ಸುಳ್ಯ ಪೊಲೀಸರು ಖಚಿತ ಮಾಹಿತಿ ಮೇರೆಗೆ ಲಾರಿಗಳನ್ನು ವಶಪಡಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.




